ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲಕಳೆಯಬಾರದು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿಯ ಟೀಕಾಪ್ರಹಾರ ಮುಂದುವರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಎಚ್ ಡಿಕೆ, ಬಿಜೆಪಿ ನಾಯಕರು ನಮ್ಮ ಮೇಲೆ ಟೀಕೆ ಮಾಡುವುದನ್ನ ಬಿಡಬೇಕು ಅದರಲ್ಲೇ ಕಾಲ ಕಳೆಯಬಾರದು ಎಂದು ಟಾಂಗ್ ನೀಡಿದರು.
ರೈತರ ಸಾಲಮನ್ನಾ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈ ಬಗ್ಗೆ ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿ ನಿರ್ಧರಿಸುತ್ತೇನೆ. ಅದರಲ್ಲಿ ಯಾವುದೇ ಸಂಶಯ ಬೇಡ ಎಂದರು. ನಿನ್ನೆ ಪ್ರತಿಜ್ಞಾವಿಧಿ ಕಾರ್ಯಕ್ರಮದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಆ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ತಿಳಿಸಿದರು.