8th Pay Commission: ಹೊಸ ವರ್ಷದಲ್ಲಿ ಕೋಟ್ಯಾಂತರ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಲು ತೀರ್ಮಾನಿಸಿದೆ. ಇಂದು (ಜನವರಿ 16) ನಡೆದ ಮೋದಿ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಮೋದಿ ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ನೌಕರರು ಅಂಟ್ಟು ಪಿಂಚಣಿದಾರರಿಗೆ ಭಾರೀ ಲಾಭವಾಗಲಿದೆ.
"ಕೇಂದ್ರ ಸರ್ಕಾರದ ಎಲ್ಲಾ ಉದ್ಯೋಗಿಗಳಿಗೆ 8ನೇ ಕೇಂದ್ರ ವೇತನ ಆಯೋಗವನ್ನು ಪ್ರಧಾನ ಮಂತ್ರಿ ಅನುಮೋದಿಸಿದ್ದಾರೆ..." ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
#WATCH | Delhi: Union Minister Ashwini Vaishnaw says, "Prime Minister has approved the 8th Central Pay Commission for all employees of Central Government..." pic.twitter.com/lrVUD25hFu
— ANI (@ANI) January 16, 2025
ಇದನ್ನೂ ಓದಿ- 7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್, ಎಲ್ಟಿಸಿ ಬಗ್ಗೆ ದೊಡ್ಡ ಘೋಷಣೆ
8ನೇ ವೇತನ ಆಯೋಗ ರಚನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ ಸಚಿವ ಅಶ್ವಿನಿ ವೈಷ್ಣವ್, ಈ ಸಂದರ್ಭದಲ್ಲಿ ಈಗಾಗಲೇ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲಾಗಿದೆ ಎಂದು ಪುನರುಚ್ಚರಿಸಿದರು. ಅಲ್ಲದೆ, 2026ರ ವೇಳೆಗೆ 8ನೇ ವೇತನ ಆಯೋಗ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.
ಗಮನಾರ್ಹವಾಗಿ, 7ನೇ ವೇತನ ಆಯೋಗವನ್ನು 2016ರಲ್ಲಿ ರಚಿಸಲಾಯಿತು. ಇದರ ಕಾಲಾವಧಿ 2026ಕ್ಕೆ ಕೊನೆಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಒಂದು ಕೋಟಿಗೂ ಅಧಿಕ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 8ನೇ ವೇತನ ಆಯೋಗ ರಚನೆಗಾಗಿ ಬಹಳ ಕಾತುರದಿಂದ ಕಾಯುತ್ತಿದ್ದರು.
ಇದನ್ನೂ ಓದಿ- EPFO Pension: ಕೇವಲ 10 ವರ್ಷ ಸೇವೆ ಸಲ್ಲಿಸಿದರೆ ಇಪಿಎಸ್ ಅಡಿಯಲ್ಲಿ ಎಷ್ಟು ಪಿಂಚಣಿ ಸಿಗುತ್ತೆ ಗೊತ್ತಾ...?
ಮೋದಿ ಸರ್ಕಾರದ ಈ ಮಹತ್ವದ ನಿರ್ಧಾರದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಭಾರೀ ಪ್ರಯೋಜನವಾಗಲಿದೆ. 8ನೇ ವೇತನ ಆಯೋಗ ರಚನೆಯ ಬಳಿಕ ಕೇಂದ್ರ ಸರ್ಕಾರಿ ನೌಕಕರು, ಪಿಂಚಣಿದಾರರಿಗೆ ಮೂಲ ವೇತನ, ಭತ್ಯೆ, ಪಿಂಚಣಿ ಮತ್ತು ಇತರ ಸೌಲಭ್ಯಗಳು ಪರಿಷ್ಕರಣೆಗೊಳ್ಳಲಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.