Gold Rate Updates: ಅಂತಾರಾಷ್ಟ್ರೀಯ ಪರಿಸ್ಥಿತಿಗಳು ಮತ್ತು ಸ್ಥಳೀಯ ಬೇಡಿಕೆಗೆ ಅನುಗುಣವಾಗಿ, ಕಳೆದ ಎರಡು ತಿಂಗಳಿನಿಂದ ದೇಶದಲ್ಲಿ ಚಿನ್ನದ ಬೆಲೆ ತೀವ್ರ ಏರಿಳಿತಗಳನ್ನು ದಾಖಲಿಸುತ್ತಿದೆ. ದೀಪಾವಳಿ ನಂತರ ಬೇಡಿಕೆ ಕುಸಿದಿರುವುದು ಮತ್ತು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿರುವುದು ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ. ಈಗ 2025 ರಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಾ ಅಥವಾ ಇಳಿಕೆಯಾಗುತ್ತಾ ಎಂದು ನೋಡೋಣ....
ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಬಂಗಾರದ ಬೆಲೆ ತೀವ್ರ ಏರಿಳಿತ ಕಂಡಿದ್ದು, ಪ್ರಸ್ತುತ 10 ಗ್ರಾಂ 22 ಕ್ಯಾರೆಟ್ ಚಿನ್ನ 71,000 ರೂಪಾಯಿ ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 77,450 ರೂಪಾಯಿ ಆಗಿದೆ. ದೀಪಾವಳಿ ನಂತರ ಬೇಡಿಕೆ ಇಳಿಕೆ, ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ವಿರಾಮ ಚಿನ್ನದ ಬೆಲೆಯಲ್ಲಿ ಏರಿಳಿತಕ್ಕೆ ಕಾರಣವಾಗಿವೆ.
2025 ರಲ್ಲಿ ಚಿನ್ನದ ಬೆಲೆ ಏರುತ್ತದೆಯೇ? ಕಡಿಮೆಯಾಗುವುದೇ? ಆ ವಿಷಯದ ಬಗ್ಗೆ ಸಾಕಷ್ಟು ಚರ್ಚೆ ಹೆಚ್ಚಾಗಿದೆ. ಪ್ರಸ್ತುತ ಅಂತರಾಷ್ಟ್ರೀಯ ಪರಿಸ್ಥಿತಿಯಿಂದಾಗಿ 2025 ರಲ್ಲಿ ಚಿನ್ನದ ಬೆಲೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ವಿಶ್ವ ಗೋಲ್ಡ್ ಕೌನ್ಸಿಲ್ (WGC) ಭವಿಷ್ಯ ನುಡಿದಿದೆ. ಡಬ್ಲ್ಯುಜಿಸಿಯ ಈ ಘೋಷಣೆಯು ಗ್ರಾಹಕರಿಗೆ ಕೊಂಚ ನೆಮ್ಮದಿಯನ್ನು ನೀಡುತ್ತಿದೆ.
ಇದನ್ನೂ ಓದಿ : ರೈತರೇ ಡಿ.31 ರೊಳಗೆ ಈ ಕೆಲಸ ಮಾಡದೇ ಹೋದರೆ ಖಾತೆ ಸೇರುವುದಿಲ್ಲ ಪಿಎಂ ಕಿಸಾನ್ ಹಣ !
ಕಳೆದ ನವೆಂಬರ್ ತಿಂಗಳಿನಲ್ಲಿಯೇ ಚಿನ್ನದ ಬೆಲೆ ವಿಪರೀತ ಏರಿಳಿತ ಕಂಡಿದೆ. ಅಂದರೆ, ನವೆಂಬರ್ ತಿಂಗಳ ಆರಂಭದಲ್ಲಿ ಒಂದೇ ವಾರದಲ್ಲಿ ತೀವ್ರ ಕುಸಿತ ದಾಖಲಾಗಿದ್ದರೆ, ನವೆಂಬರ್ ಅಂತ್ಯದ ಒಂದೇ ವಾರದಲ್ಲಿ ತೀವ್ರ ಏರಿಕೆ ದಾಖಲಾಗಿದೆ. ನವೆಂಬರ್ 5 ರಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆದಿದ್ದು, ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿತು. ಡಾಲರ್ ಮೌಲ್ಯ ಏರುತ್ತಿರುವುದೇ ಇದಕ್ಕೆ ಕಾರಣ ಎಂಬುದು ತಜ್ಞರ ಅಭಿಪ್ರಾಯ. ಆದರೆ ನವೆಂಬರ್ 19 ರಿಂದ 24 ರ ನಡುವೆ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ.
ಚಿನ್ನದ ಬೆಲೆಗಳ ಬಗ್ಗೆ ವಿಶ್ವ ಗೋಲ್ಡ್ ಕೌನ್ಸಿಲ್ ಏನು ಹೇಳುತ್ತದೆ?
ಕಳೆದ ಕೆಲವು ತಿಂಗಳುಗಳಿಂದ ಚಿನ್ನದ ಬೆಲೆ ತೀವ್ರ ಏರಿಳಿತಗಳನ್ನು ಎದುರಿಸುತ್ತಿರುವಾಗಲೇ ವಿಶ್ವ ಗೋಲ್ಡ್ ಕೌನ್ಸಿಲ್ ಮುಂದಿನ ವರ್ಷ 2025 ರ ಮಹತ್ವದ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ. 2025 ರಲ್ಲಿ, ಚಿನ್ನದ ಬೆಲೆ ಬಗ್ಗೆ ಭವಿಷ್ಯ ನುಡಿದಿದೆ.
ಡೊನಾಲ್ಡ್ ಟ್ರಂಪ್ ಅವರು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರಾಗಿ ಆಯ್ಕೆಯಾದ ಕಾರಣ, ಅವರು ಜನವರಿ 20, 2025 ರಂದು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಂತದಲ್ಲಿ ಜಾಗತಿಕ ಹೂಡಿಕೆದಾರರ ಗಮನ ಡಾಲರ್ ಮೇಲೆ ಕೇಂದ್ರೀಕೃತವಾಗಿದೆ. ಇದರಿಂದ ಚಿನ್ನದ ಬೆಲೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡರೆ, ಹೂಡಿಕೆದಾರರು ಮತ್ತೆ ಷೇರು ಮಾರುಕಟ್ಟೆಗಳಲ್ಲಿ ಹೂಡಿಕೆಗೆ ಒಲವು ತೋರುವ ಸಾಧ್ಯತೆಯಿದೆ. ಆದರೆ ಸದ್ಯದ ಅಂತರಾಷ್ಟ್ರೀಯ ಪರಿಸ್ಥಿತಿಯಲ್ಲಿ ಬದಲಾವಣೆಯಾದರೆ ಚಿನ್ನದ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ. ವಿಶ್ವದ ಹಲವು ಪ್ರಮುಖ ಬ್ಯಾಂಕ್ಗಳು ಕೂಡ ಇದನ್ನೇ ಭವಿಷ್ಯ ನುಡಿಯುತ್ತಿವೆ. ವಿಶ್ವ ಗೋಲ್ಡ್ ಕೌನ್ಸಿಲ್ ಪ್ರಕಾರ, 2025 ರಲ್ಲಿ ಚಿನ್ನದ ಬೆಲೆಗಳು ನಿಧಾನವಾಗಿ ಏರಿಕೆಯಾಗಲಿವೆ.
ಇದನ್ನೂ ಓದಿ : ನನಸಾಗುವುದು ಸ್ವಂತ ಮನೆಯ ಕನಸು! ನಿಮ್ಮಲ್ಲಿ ಈ ದಾಖಲೆ ಇದ್ದರೆ ಮನೆ ನಿರ್ಮಾಣಕ್ಕೆ ಧನ ಸಹಾಯ ಮಾಡುವುದು ಕೇಂದ್ರ ಸರ್ಕಾರ
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.