ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: ವಾಹನ ಸವಾರರಿಗೆ ಗುಡ್ ನ್ಯೂಸ್

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಸಂಬಂಧಿಸಿದಂತೆ ವಾಹನ ಸವಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್. 

Written by - Yashaswini V | Last Updated : Nov 5, 2024, 02:16 PM IST
  • ಸರ್ಕಾರದ ನಿಯಮಾನುಸಾರ 2019ರ ಮೊದಲು ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯ
  • ಈಗಾಗಲೇ ನಾಲ್ಕು ಬಾರಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿರುವ ಸರ್ಕಾರ
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: ವಾಹನ ಸವಾರರಿಗೆ ಗುಡ್ ನ್ಯೂಸ್  title=

HSRP Number Plate News: ನೀವಿನ್ನೂ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಎಂದರೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ವಾ.? ನಿಮಗಾಗಿ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್. ಈಗಾಗಲೇ ನಾಲ್ಕು ಬಾರಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿರುವ ಸರ್ಕಾರ ಇದೀಗ ಮತ್ತೊಮ್ಮೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯವನ್ನು ವಿಸ್ತರಿಸಿ ಆದೇಶಿಸಿದೆ. 

ವಾಸ್ತವವಾಗಿ, ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ನಾಲ್ಕು ಬಾರಿ ಸಮಯ ವಿಸ್ತರಿಸಿ ಗಡುವು ಮುಗಿದಿದ್ದರೂ ಸಹ, ಇನ್ನೂ ಲಕ್ಷಾಂತರ ವಾಹನ ಮಾಲೀಕರು ಎಚ್‌ಎಸ್‌ಆರ್‌ಪಿ ಪ್ಲೇಟ್ ಅಳವಡಿಸಿಲ್ಲ. ಅಂತಹವರಿಗೆ ಮತ್ತೊಂದು ಅವಕಾಶ ನೀಡಿರುವ ರಾಜ್ಯ ಸಾರಿಗೆ ಇಲಾಖೆ ಇದೀಗ ನವೆಂಬರ್ 30ರವರೆಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯಾವಕಾಶವನ್ನು ನೀಡಿದೆ. 

ಇದನ್ನೂ ಓದಿ- ಭಾರತದ 7 ಶ್ರೀಮಂತ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ ಎಷ್ಟನೇ ಸ್ಥಾನ ಗೊತ್ತಾ?

ಡಿಸೆಂಬರ್ 01ರಿಂದ ಬೀಳಲಿದೆ  ಭಾರೀ ದಂಡ: 

ಸರ್ಕಾರದ ನಿಯಮಾನುಸಾರ 2019ರ ಮೊದಲು ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ. ಇದೀಗ ನವೆಂಬರ್ 30ರ ಮೊದಲು ಈ ಕಾರ್ಯವನ್ನು ಮಾಡದಿದ್ದರೆ ಡಿಸೆಂಬರ್ 01ರಿಂದ ವಾಹನ ಸವಾರರು ಭಾರೀ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ. 

ಇದನ್ನೂ ಓದಿ- ಎಸ್‌ಬಿ‌ಐನ ಇಂತಹ ಸೇವಿಂಗ್ಸ್ ಖಾತೆಯಲ್ಲಿ Zero Balanceಗೂ ಬೀಳಲ್ಲ ದಂಡ, ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: 

ಎಚ್‌ಎಸ್‌ಆರ್‌ಪಿ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದು ಅರ್ಥವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ವಾಹನಗಳಿಗೆ ಇದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ವಾಹನ ಮಾಲೀಕರು ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

  1. https://bit.ly/3AClgDdAndroid Link - 
  2. https://apple.co/3wPoNgrApple Link - 
  3. ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
  4. https://bit.ly/3n6d2R8Twitter Link - 
  5.  https://bit.ly/3HhqmcjFacebook Link - 
  6. Youtube Link - https://www.youtube.com/live/RNn4I7iIaYE?si=3G4W5dh0oCdFnu-T

Trending News