Bangalore Metro Recruitment 2024: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕೃತ ವೆಬ್‌ಸೈಟ್ bmrc.co.in ಮೂಲಕ ಉದ್ಯೋಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಒಟ್ಟು 11 ಹುದ್ದೆಗಳು ಖಾಲಿ ಇದ್ದು, ಮುಖ್ಯ ಇಂಜಿನಿಯರ್ (ಸಲಹೆಗಾರ), ಡೆಪ್ಯುಟಿ ಮುಖ್ಯ ಇಂಜಿನಿಯರ್ ಮತ್ತು ಸೆಕ್ಷನ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಯಾ ಹುದ್ದೆಗಳ ಪ್ರೊಫೈಲ್‌ಗೆ ಹೊಂದಿಕೆಯಾಗುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ 1,06,250 ರೂ. ವೇತನ ಪಡೆಯಬಹುದು.
ಇದನ್ನೂ ಓದಿ: ಸಂತೆಯಲ್ಲಿ ಸುಂಕ ವಸೂಲಿ: ರೈತರಿಂದ ದಿಢೀರ್ ಪ್ರತಿಭಟನೆ
Recruitment of Engineers on Contract basis by BMRCL below is the Advertisement👇in Newspapers today pic.twitter.com/gwphcFEqYH
— ನಮ್ಮ ಮೆಟ್ರೋ (@OfficialBMRCL) July 6, 2024
ವಿದ್ಯಾರ್ಹತೆ: ಈ ಕೆಲಸಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬಿಇ/ಬಿಟೆಕ್ ಮಾಡಿರಬೇಕು. ಸಿವಿಲ್, ಎಲೆಕ್ಟ್ರಿಕಲ್, ಬಿ.ಆರ್ಕ್(Bachelor of Architecture) ಆಗಿರುವ ಅಭ್ಯರ್ಥಿಗಳಿಗೆ ವಿಶೇಷ ಆಧ್ಯತೆ ನೀಡಲಾಗುತ್ತಿದೆ. MBA (ಮಾರ್ಕೆಟಿಂಗ್) ಜೊತೆಗೆ ನೀವು ಆಯ್ಕೆ ಮಾಡಿದ ಹುದ್ದೆಯ ಪ್ರಕಾರದ ಮೇಲೆ ಕೆಲಸದ ಪಾತ್ರವು ಬದಲಾಗುತ್ತದೆ.
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಯಸ್ಸು 45 ವರ್ಷಕ್ಕಿಂತ ಹೆಚ್ಚಿರಬಾರದು. ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಯಸ್ಸು 40 ವರ್ಷಕ್ಕಿಂತ ಹೆಚ್ಚಿರಬಾರದು. ಆಯ್ಕೆಯಾದ ಅಭ್ಯರ್ಥಿಗಳು ಕನಿಷ್ಟ 3 ವರ್ಷಗಳ ಕಾಲ ಕೆಲಸ ಮಾಡಬೇಕು.
ಅರ್ಜಿ ಸಲ್ಲಿಸುವುದು ಹೇಗೆ..?
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
- ಲಾಗಿನ್ ಆದ ನಂತರ ನೇಮಕಾತಿ ವಿಭಾಗಕ್ಕೆ ಹೋಗಬೇಕು
- ಅರ್ಜಿ ನಮೂನೆಯಲ್ಲಿ ನೀಡಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕು
- ವೈಯಕ್ತಿಕ ವಿವರ ಸೇರಿದಂತೆ ಎಲ್ಲಾ ಮಾಹಿತಿ ನೀಡಿ ಅರ್ಜಿ ಶುಲ್ಕವನ್ನು ಪಾವತಿಸಬೇಕು
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.07.2024 ಆಗಿರುತ್ತದೆ.
ಮುದ್ರಿತ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05.08.2024 ಆಗಿದ್ದು, ನೀವು General Manager (HR), Bangalore Metro Rail Corporation Limited, III Floor, BMTC Complex, K.H. ರಸ್ತೆ, ಶಾಂತಿನಗರ, ಬೆಂಗಳೂರು 560 027 ಈ ವಿಳಾಸಕ್ಕೆ ಹಾರ್ಡ್ ಕಾಪಿಯನ್ನು ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಈ ವಿಳಾಸಕ್ಕೆ ಹಾರ್ಡ್ ಪ್ರತಿಯನ್ನು ಮೇಲ್ ಸಹ ಮಾಡಬೇಕು.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.