ಕರಾಮುವಿನಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆ ತರಬೇತಿಗೆ ಕೂಡಲೇ ನೊಂದಾಯಿಸಿ

ಆಸಕ್ತರು ಫೆ.15, 2023ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

Written by - Zee Kannada News Desk | Last Updated : Feb 15, 2023, 03:31 PM IST
  • ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು
  • ಹೆಚ್ಚಿನ ಮಾಹಿತಿಗಾಗಿ-0821-2515944/9964760090 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
  • ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ
ಕರಾಮುವಿನಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆ ತರಬೇತಿಗೆ ಕೂಡಲೇ ನೊಂದಾಯಿಸಿ title=
file photo

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿ: Milestone Issue: ಕನ್ನಡಕ್ಕೂ ಇಂಗ್ಲೀಷ್ ಗೂ ಇದ್ದಿದ್ದು ಮೂರೇ ಕಿ.ಮೀ ಅಂತರ! ಮುಂದೇನಾಯ್ತು..?

ಆಸಕ್ತರು ಫೆ.15, 2023ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ-0821-2515944/9964760090 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News