Bengaluru: ಸಿಲಿಕಾನ್‌ ಸಿಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

Bengaluru Murder Case: ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜೀತ್ ಕೆಲಸ ಮುಗಿಸಿ ವಾಪಸ್ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. 

Written by - Puttaraj K Alur | Last Updated : Jul 3, 2024, 11:40 PM IST
  • ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ
  • ಮನಸೋಯಿಚ್ಚೆ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದ್ದು, ಜನರು ಆತಂಕಗೊಂಡಿದ್ದಾರೆ
  • ಹಣಕಾಸಿನ ವಿಚಾರವಾಗಿ ಪುಲಿಕೇಶಿನಗರದ ಕಾಕ್ಸ್ ಟೌನ್ ಬಳಿ ವ್ಯಕ್ತಿಯ ಬರ್ಬರ ಹತ್ಯೆ
Bengaluru: ಸಿಲಿಕಾನ್‌ ಸಿಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ! title=
ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ‌ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಅಜೀತ್‌ (35) ಎಂಬ ವ್ಯಕ್ತಿಯನ್ನು ಕೊಲೆ ಮಾಡಿ ಆರೋಪಿಗಳು ಎಸ್ಕೇಪ್‌ ಆಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.ಪುಲಿಕೇಶಿನಗರದ ಕಾಕ್ಸ್‌ಟೌನ್ ಬಳಿಕ ಮನಸೋಯಿಚ್ಚೆ ಕೊಚ್ಚಿ ಅಜೀತ್‌ನನ್ನು ಕೊಲೆ ಮಾಡಲಾಗಿದ್ದು, ಜನರು ಆತಂಕಗೊಂಡಿದ್ದಾರೆ. ಬಡ್ಡಿ ವ್ಯವಹಾರದ ಕಾರಣ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ಅಜೀತ್‌ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಹತ್ರಾಸ್‌ ಅಪಘಾತ ಸ್ಥಳ ಪರಿಶೀಲಿಸಿದ ವಿಧಿ ವಿಜ್ಞಾನ ತಂಡ

ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. 

ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜೀತ್ ಕೆಲಸ ಮುಗಿಸಿ ವಾಪಸ್ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ: ಬೆಳೆ ವಿಮೆ ಮಂಜೂರಾತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಜೀತ್‌ನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಕೊಲೆಯಾದ ಸ್ಥಳದಲ್ಲಿ ಹರಿದ ನೆತ್ತರು ಕಂಡು ಜನರು ಭಯಭೀತರಾಗಿದ್ದಾರೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News