ಕ್ಷುಲ್ಲಕ ಕಾರಣಕ್ಕೆ ಜಗಳ: ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರ ಬರ್ಬರ ಹತ್ಯೆ!

Belagavi Youths Murder: ಬೆಳಗಾವಿ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಏರ್ಪಡಿಸಲಾಗಿತ್ತು. ಕ್ರಿಕೆಟ್ ಆಡುತ್ತಿದ್ದ ವೇಳೆ ಅಪರಿಚಿ ವ್ಯಕ್ತಿಯೊಬ್ಬ ಮೈದಾನಕ್ಕೆ ವಾಹನ ನುಗ್ಗಿಸಿದ್ದ. ಇದನ್ನು ಪ್ರಶ್ನಿಸಿದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

Written by - Zee Kannada News Desk | Last Updated : Dec 27, 2022, 12:14 AM IST
  • ಬೆಳಗಾವಿಯ ಹೊರ ವಲಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ಹತ್ಯೆ
  • ಹಾಡಹಗಲೇ ಕ್ರಿಕೆಟ್ ಆಡುತ್ತಿದ್ದ ಯುವಕರ ಡಬಲ್ ಮರ್ಡರ್ ಕೇಳಿ ಬೆಚ್ಚಿಬಿದ್ದ ಜನರು
  • ಕ್ರಿಕೆಟ್ ಆಡುತ್ತಿದ್ದ ವೇಳೆ ಮೈದಾನಕ್ಕೆ ವಾಹನ ನುಗ್ಗಿಸಿದ್ದನ್ನು ಪ್ರಶ್ನಿಸಿದ ಯುವಕರ ಹತ್ಯೆ
ಕ್ಷುಲ್ಲಕ ಕಾರಣಕ್ಕೆ ಜಗಳ: ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರ ಬರ್ಬರ ಹತ್ಯೆ! title=
ಬೆಳಗಾವಿಯಲ್ಲಿ ಡಬಲ್ ಮರ್ಡರ್!

ಬೆಳಗಾವಿ: ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿಯ ಹೊರ ವಲಯದಲ್ಲಿ ಆಗಿರುವ ಈ ಡಬಲ್ ಮರ್ಡರ್ ಸುದ್ದಿ ಕೇಳಿ ಜನರು ಬೆಚ್ಚಿಬಿದ್ದಿದ್ದಾರೆ.    

ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿಂಧೋಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್ (22) ಮತ್ತು ಗಿರೀಶ್ ನಾಗಣ್ಣವರ (22) ಹತ್ಯೆಯಾದವರು.

ಇದನ್ನೂ ಓದಿ: ಮಂಗಳಮುಖಿ ಮನೆಯಲ್ಲಿ ಮಸಾಜ್ ಮಾಡಿಸಲು ಬಂದು ಕಳ್ಳತನ

ಶಿಂಧೋಳಿ ಗ್ರಾಮದ ಸರ್ಕಾರಿ ಶಾಲಾ ಮೈದಾನದಲ್ಲಿ ಭಾನುವಾರ ರಾತ್ರಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯವನ್ನು ಏರ್ಪಡಿಸಲಾಗಿತ್ತು. ಸಂಜೆ 7ರ ಸುಮಾರಿಗೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯ ವಾಹನವೊಂದು ಬಂದಿದೆ. ಮೈದಾನಕ್ಕೆ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ಕ್ರಿಕೆಟ್ ಆಡುತ್ತಿದ್ದ ಯುವಕರು ಮತ್ತು ವಾಹನ ಚಾಲಕನ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಒಬ್ಬರಿಗೊಬ್ಬರು ಹೊಡೆದಾಡತೊಡಗಿದ್ದಾರೆ. ಯುವಕರ ಆಕ್ಷೇಪಕ್ಕೆ ಸಿಟ್ಟಾದ ವಾಹನ ಚಾಲಕ ಚಾಕುವಿನಿಂದ ಕೊಚ್ಚಿ ಯುವಕರಿಬ್ಬರನ್ನು ಹತ್ಯೆ ಮಾಡಿದ್ದಾನೆ. ಕೋಪದ ಭರದಲ್ಲಿ ವಾಹನ ಚಾಲಕ ಯುವಕರ ಮೇಲೆ ಚಾಕುವಿನಿಂದ ಮನಬಂದಂತೆ ಚುಚ್ಚಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.

ಇದನ್ನೂ ಓದಿ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಸಾವು.. ಓರ್ವನ ಸ್ಥಿತಿ ಚಿಂತಾಜನಕ

ಆದರೆ ಆಸ್ಪತ್ರೆ ಮುಟ್ಟುವುದರಲ್ಲಿ ಇಬ್ಬರು ಯುವಕರು ಪ್ರಾಣಬಿಟ್ಟಿದ್ದರು ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ಮೃತದೇಹಗಳನ್ನು ಬಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಯುವಕರ ಹತ್ಯೆಯಾದ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News