Engagement Kannada movie : ಇತ್ತೀಚೆಗೆ ಬಿಡುಗಡೆಯಾದ ‘ಪ್ರವೀಣ’ ಚಿತ್ರದಲ್ಲಿ ತಮ್ಮ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ನಟಿ ಐಶ್ವರ್ಯಾ ಗೌಡ, ಇದೀಗ ಬೋನಗಾನಿ ಎಂಟರ್ಟೈನ್ಮೆಂಟ್ಸ್ನಡಿ ನಿರ್ಮಾಣವಾಗುತ್ತಿರುವ ‘ಎಂಗೇಜ್ಮೆಂಟ್’ ಎಂಬ ಪ್ಯಾನ್ ಇಂಡಿಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಹೌದು.. ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ‘ಪ್ರವೀಣ’ ಚಿತ್ರದಲ್ಲಿ ನಟಿಸಿದರು. ಆ ನಂತರ ರಾಜು ಬೋನಗಾನಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ರೇವ್ ಪಾರ್ಟಿ’ಯಲ್ಲಿ ದ್ವಿತೀಯ ನಾಯಕಿಯಾಗಿ ಅಭಿನಯಿಸಿದರು. ಇಂದಿನ ಯುವಜನತೆ ಡ್ರಗ್ಸ್ಗೆ ಹೇಗೆ ದಾಸರಾಗುತ್ತಿದ್ದಾರೆ ಎಂದು ಸಾರುವ ಈ ಚಿತ್ರ ಬಿಡುಗಡೆ ಆಗುವುದಕ್ಕಿಂತ ಮೊದಲೇ, ಅದೇ ನಿರ್ದೇಶಕರ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರವಾದ ‘ಎಂಗೇಜ್ಮೆಂಟ್’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಡಾ. ಸುಧಾಕರ್ ಪರ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಭರ್ಜರಿ ಪ್ರಚಾರ..!
ತಮ್ಮ ಚಿತ್ರಜೀವನದ ಕುರಿತು ಮಾತನಾಡುವ ಐಶ್ವರ್ಯಾ, ‘ನನಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಅಪಾರವಾದ ಆಸಕ್ತಿ. ಅದೇ ಆಸಕ್ತಿಯಿಂದ ‘ಜಾಗ್ವಾರ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದೆ. ‘ಪ್ರವೀಣ’ ಚಿತ್ರ ಸಹ ನನಗೆ ಒಳ್ಳೆಯ ಬ್ರೇಕ್ ನೀಡಿತು. ಆ ಚಿತ್ರದಿಂದ ನನಗೆ ‘ರೇವ್ ಪಾರ್ಟಿ’ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಅದರಲ್ಲಿನ ನನ್ನ ಅಭಿನಯದ ನೋಡಿ ನಿರ್ದೇಶಕ ಬೋನಗಾನಿ ಅವರು ‘ಎಂಗೇಜ್ಮೆಂಟ್’ ಚಿತ್ರದಲ್ಲಿ ನಾಯಕಿಯಾಗುವ ಅವಕಾಶವನ್ನು ನೀಡಿದ್ದಾರೆ. ಈ ಚಿತ್ರ ಸಹ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಕಾಣಲಿದೆ ಎಂಬ ನಂಬಿಕೆ ನನಗಿದೆ’ ಎಂದು ಹೇಳುತ್ತಾರೆ.
ಸದ್ಯ ʼಎಂಗೇಜ್ಮೆಂಟ್ʼ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.