Anupama Parmeshwaran Renumeration For Tillu-2: ಮಾಲಿವುಡ್ ಬೆಡಗಿ ಅನುಪಮಾ ಪರಮೇಶ್ವರನ್ ಚಿತ್ರರಂಗಕ್ಕೆ ಹೆಜ್ಜೆಹಾಕಿದಾಗ ಲಂಗಾ ದಾವಣಿ, ಸೀರೆಯಲ್ಲಿ ಅಭಿನಯಿಸಿ ಅಭಿಮಾನಿಗಳ ಮನಗೆದ್ದಿದ್ದರು. ಆದರೆ ಈ ನಟಿ ಇತ್ತೀಚೆಗೆ ಬೆಳ್ಳಿ ತೆರೆ ಮೇಲೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುವುದರಿಂದ ಆಕೆಯ ಫ್ಯಾನ್ಸ್ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಟಿ ಅನುಪಮಾ ಕೇವಲ ಸಿನಿಮಾಗಳಲ್ಲಿ ಮಾತ್ರವಲ್ಲದೇ ಸೋಶಿಯಲ್ ಮೀಡಿಯಾದಲ್ಲೂ ಹಾಟ್ ಹಾಟ್ ಫೋಟೊಶೂಟ್ನಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ.
ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ 'ಟಿಲ್ಲು-2' ಚಿತ್ರದಲ್ಲಿ ಬಣ್ಣಹಚ್ಚಿದ್ದು, ಈಗಾಗಲೇ ಇದರ ಟ್ರೇಲರ್ ಬಿಡುಗಡೆಯಾಗಿ ಸಖತ್ ಸದ್ದು ಮಾಡ್ತಿದೆ. ಸದ್ಯ ಈಕೆ ಸಿನಿಮಾದಲ್ಲಿ ಹಾಟ್ಆಗಿ ಕಾಣಿಸಿಕೊಳ್ಳುವುದರ ಜೊತೆಗೆ ಸಿದ್ದು ಜೊನ್ನಲಗಡ್ಡಯೊಂದಿಗೆ ತುಟಿಗೆ ತುಟಿ ಬೆರೆಸಿರುವಂತೆ ಬಿಂದಾಸ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಈ ಕಾರಣದಿಂದಲೇ ಚಿತ್ರದ ಝಲಕ್ ವೈರಲ್ ಆಗಿದೆ. ಈ ನಟಿ ಇದಕ್ಕೂ ಮುಂಚೆ 'ರೌಡಿ ಬಾಯ್ಸ್' ಎನ್ನುವ ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದರು.
ಇದನ್ನೂ ಓದಿ: Kagney linn karter : ಪೋರ್ನ್ ಸ್ಟಾರ್ ಕೆನಿ ಲಿನ್ ಕಾರ್ಟರ್ ಆತ್ಮಹತ್ಯೆ..! ದುಃಖದಲ್ಲಿ ಅಭಿಮಾನಿಗಳು
ಈಗಾಗಲೇ ಟಾಲಿವುಡ್ ಅಂಗಳದಲ್ಲಿ ನಟಿ ಅನುಪಮಾ ಪರಮೇಶ್ವರನ್ 'ಟಿಲ್ಲು'-2 ಚಿತ್ರಕ್ಕಾಗಿ ಭರ್ಜರಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ನಟಿಗೆ ಹೆಚ್ಚು ಸಂಭಾವನೆ ಸಿಕ್ಕಿರುವ ಕಾರಣದಿಂದಲೇ ಗ್ಲಾಮರ್ ಶೋ ಹೆಚ್ಚಾಗಿದೆ ಅನ್ನೋ ಚರ್ಚೆ ಕೂಡ ನಡೀತಿದೆ. ಸದ್ಯ ಈ ಸಿನಿಮಾದ ಟ್ರೇಲರ್ ಹಾಗೂ ಸಾಂಗ್ಸ್ ರಿಲೀಸ್ ಆಗಿ ಸದ್ದು ಮಾಡುತ್ತಿದ್ದು, ಈ ಚಿತ್ರದಲ್ಲಿ ನಟಿಸುವುದಕ್ಕಾಗಿ ಈ ನಟಿಸಲು 2 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ನಟಿ ಅನುಪಮಾ ಪರಮೇಶ್ವರನ್ ಸಾಮಾನ್ಯವಾಗಿ ಒಂದು ಸಿನಿಮಾದಲ್ಲಿ ಬಣ್ಣಹಚ್ಚುವುದಕ್ಕೆ ಒಂದೂವರೆ ಕೋಟಿ ರೂ. ಚಾರ್ಜ್ ಮಾಡುತ್ತಾರಂತೆ. ಆದರೇ 'ಟಿಲ್ಲು-2' ಚಿತ್ರದಲ್ಲಿ ನಟಿಸಿದಕ್ಕೆ ಸಮೀಪ 2 ಕೋಟಿ ರೂ. ಪಡೆದಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದ್ದು, ಈ ಕಾರಣದಿಂದ ಇಂತಹ ದೃಶ್ಯಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆಂದು ಟಾಲಿವುಡ್ ಮಂದಿ ಹೇಳುತ್ತಿದ್ದಾರೆ. ಈ ನಟಿಯನ್ನು ಈ ರೀತಿ ನೋಡಿದ ಅಭಿಮಾನಿಗಳು ಇಷ್ಟು ಹಾಟ್ ಆಗಿ ಕಾಣಿಸಿಕೊಳ್ಳುವುದು ನಮಗೆ ಇಷ್ಟವಾಗುತ್ತಿಲ್ಲ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.