ಹೈದರಾಬಾದ್: ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ನಲ್ಲಿ ಬಹು ನಿರೀಕ್ಷಿತ ಪುಷ್ಪ 2 ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದರು.
ಈಗ ಈ ಪ್ರಕರಣ ವಿಚಾರವಾಗಿ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು "ಪ್ರಕರಣದ ತನಿಖೆಯಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಕಾರಣ ಪೊಲೀಸ್ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
#Arrest @alluarjun video pic.twitter.com/U1B5d6wa9D
— devipriya (@sairaaj44) December 13, 2024
ಇದನ್ನೂ ಓದಿ-ಟಿಆರ್‌ಪಿಯಲ್ಲಿ ಬಿಗ್‌ಬಾಸ್‌ನ್ನೇ ಹಿಂದಿಕ್ಕಿದ ಕನ್ನಡದ ಪ್ರಖ್ಯಾತ ಧಾರಾವಾಹಿ!
ಘಟನೆ ನಡೆದಿದ್ದೇಗೆ?
ಅಲ್ಲು ಅರ್ಜುನ್ ಡಿಸೆಂಬರ್ 4 ರಂದು ತಮ್ಮ ಬಹು ನಿರೀಕ್ಷಿತ ಚಿತ್ರ ಪುಷ್ಪ 2: ದಿ ರೂಲ್ ವಿಶೇಷ ಪ್ರದರ್ಶನಕ್ಕಾಗಿ ಸಂಧ್ಯಾ ಥಿಯೇಟರ್‌ಗೆ ಭೇಟಿ ನೀಡಿದ ನಂತರ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಇದೆ ವೇಳೆ ಎಂಟು ವರ್ಷದ ಮಗನ ಸ್ಥಿತಿ ಗಂಭೀರವಾಗಿತ್ತು.ಈ ಸಂದರ್ಭದಲ್ಲಿ ಮೃತ ಮಹಿಳೆಯ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ ನಂತರ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಅವರ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಅಲ್ಲು ಅರ್ಜುನ್ ಬಂಧನದ ವಿಡಿಯೋ ವೈರಲ್:
ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಅಲ್ಲು ಅರ್ಜುನ್ ಬಂಧನದ ವಿಡಿಯೋ ವೈರಲ್ ಆಗಿದ್ದು. ಈ ಕುರಿತಾಗಿ ಅಭಿಮಾನಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಕಾನೂನು ಎಲ್ಲರಿಗೂ ಒಂದೇ ಎಂದು ಹೇಳುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.