Rishabh Shetty Bollywood Entry: ನಿರ್ದೇಶಕ ಸಂದೀಪ್ ಸಿಂಗ್ ಅವರ ಮುಂಬರುವ ಐತಿಹಾಸಿಕ ಸಿನಿಮಾ "ದಿ ಪ್ರೈಡ್ ಆಫ್ ಇಂಡಿಯಾ: ಛತ್ರಪತಿ ಶಿವಾಜಿ ಮಹಾರಾಜ್" ನಲ್ಲಿ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಶಿವಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬುದು ಅಭಿಮಾನಿಗಳಿಗೆ ಸಂತಸ ತಂದಿದೆ. ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದ್ದು, ಶಿವಾಜಿ ಮಹಾರಾಜನ ಪಾತ್ರದಲ್ಲಿ ರಿಷಬ್ ಶೆಟ್ಟಿಯನ್ನು ನೋಡಿ ಫ್ಯಾನ್ಸ್ ಬೆರಗಾಗಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ "ದಿ ಪ್ರೈಡ್ ಆಫ್ ಇಂಡಿಯಾ: ಛತ್ರಪತಿ ಶಿವಾಜಿ ಮಹಾರಾಜ್" ಎಂಬ ಐತಿಹಾಸಿಕ ಚಲನಚಿತ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಅನ್ನು ರಿಷಬ್ ಶೆಟ್ಟಿ ಅವರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ.
ಇದನ್ನೂ ಓದಿ: 15 ಸೂಪರ್ ಹಿಟ್ ಸಿನಿಮಾ ಕೊಟ್ಟಿರುವ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಒಟ್ಟು ಆಸ್ತಿ ಎಷ್ಟು ಗೊತ್ತಾ?
ರಿಷಬ್ ಶೆಟ್ಟಿ ಅವರು ಇನ್ಸ್ಟಾಗ್ರಾಮ್ನಲ್ಲಿ ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಸಿನಿಮಾ 2027 ರ ಜನವರಿ 21 ರಂದು ಚಿತ್ರಮಂದಿರಗಳಲ್ಲಿ ಬರಲಿದೆ ಎಂದು ರಿಷಬ್ ಹೇಳಿದ್ದಾರೆ. ಶಿವಾಜಿ ಜೀವನಾಧಾರಿತ ಚಿತ್ರ ಇದಾಗಿದೆ.
ಶಿವಾಜಿ ಮಹಾರಾಜರ ಬಯೋಪಿಕ್ ಸಂದೀಪ್ ನಿರ್ದೇಶಿಸಲಿದ್ದಾರೆ. ನಿರ್ದೇಶಕ ಸಂದೀಪ್ ಅವರ "ದಿ ಪ್ರೈಡ್ ಆಫ್ ಇಂಡಿಯಾ: ಛತ್ರಪತಿ ಶಿವಾಜಿ ಮಹಾರಾಜ್" ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದು ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
Our Honour & Privilege, Presenting the Epic Saga of India’s Greatest Warrior King – The Pride of Bharat: #ChhatrapatiShivajiMaharaj. #ThePrideOfBharatChhatrapatiShivajiMaharaj
This isn’t just a film – it’s a battle cry to honor a warrior who fought against all odds, challenged… pic.twitter.com/CeXO2K9H9Q
— Rishab Shetty (@shetty_rishab) December 3, 2024
ಕಾಂತಾರ ಚಾಪ್ಟರ್ 1 ಬಳಿಕ ರಿಷಬ್ ಶೆಟ್ಟಿ ಖ್ಯಾತಿ ದೇಶದೆಲ್ಲೆಡೆ ಹಬ್ಬಿತು. ಅವರ ನಟನೆಗೆ ಜನರು ಮನಸೋತಿದ್ದರೆ. ಕಾಂತಾರದಲ್ಲಿನ ಅದ್ಭುತ ನಟನೆಗಾಗಿ ರಿಷಬ್ ಶೆಟ್ಟಿ ರಾಷ್ಟ್ರ ಪ್ರಶಸ್ತಿಯನ್ನು ಸಹ ಪಡೆದಿದ್ಧಾರೆ.
ಇದನ್ನೂ ಓದಿ: ರಂಗಾಯಣ ರಘು ಪತ್ನಿ ಕೂಡ ಕನ್ನಡದ ಖ್ಯಾತ ನಟಿ... ಮಗಳಂತೂ ಸಿಕ್ಕಾಪಟ್ಟೆ ಫೇಮಸ್!
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.