Max Movie Trailer: ನಟ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ಸಾಕಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಇದೀಗ ಮ್ಯಾಕ್ಸ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮ್ಯಾಕ್ಸಿಮಮ್ ಮಾಸ್ ಅವತಾರದಲ್ಲಿ ಸುದೀಪ್ ಅವರನ್ನು ಕಂಡ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸುದೀಪ್ ಅಬ್ಬರಕ್ಕೆ ಫಿದಾ ಆಗುತ್ತಿದ್ದಾರೆ.
ಮ್ಯಾಕ್ಸ್ ಸಿನಿಮಾ ಟ್ರೇಲರ್ ರಿಲೀಸ್ ಬಳಿಕ ಜನರ ನಿರೀಕ್ಷೆಯನ್ನು ಡಬಲ್ ಮಾಡಿದೆ. ಚಿತ್ರದುರ್ಗದಲ್ಲಿ ನಡೆದ ಮಾಕ್ಸ್ ಪ್ರೀ ರಿಲೀಸ್ ಇವೆಂಟ್ ನಲ್ಲಿ ಟ್ರೇಲರ್ ಬಿಡಗಡೆ ಮಾಡಲಾಯಿತು. ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳಿದ್ದು, ಕಿಚ್ಚನ ಅಬ್ಬರ ಬಲು ಜೋರಾಗಿದೆ.ಸುದೀಪ್ ಮಾಸ್ ಲುಕ್ ಅಭಿಮಾನಿಗಳಿಗೆ ಖುಷಿ ತಂದಿದೆ.
ಇದನ್ನೂ ಓದಿ: 12 ಮಕ್ಕಳನ್ನ ಹೆರುವ ಆಸೆ ವ್ಯಕ್ತಪಡಿಸಿದ ಕನ್ನಡದ ಕೂಲ್ ಸಿನಿಮಾ ನಟಿ ಸನಾ ಖಾನ್! ಇವರ ಪತಿ ಯಾರು ಗೊತ್ತಾ?
ಮ್ಯಾಕ್ಸ್ ಚಿತ್ರದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ ಎಂಬುದು ಮತ್ತೊಂದು ವಿಶೇಷ. ಪಕ್ಕಾ ಆ್ಯಕ್ಷನ್ ಸಿನಿಮಾ ‘ಮ್ಯಾಕ್ಸ್’ ಸಿನಿಪ್ರಿಯರಿಗೆ ಸಖತ್ ಮನರಂಜನೆ ನೀಡಲಿದೆ. ಖಡಕ್ ಡೈಲಾಗ್ ಲೇಡಿ ವಿಲನ್ ಕ್ಯಾರೆಕ್ಟರ್ ಜನರ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಮ್ಯಾಕ್ಸ್ ಸಿನಿಮಾದಲ್ಲಿ ಉಗ್ರಂ ಮಂಜು, ಶರತ್ ಲೋಹಿತಾಶ್ವ, ಸುನಿಲ್, ಪ್ರಮೋದ್ ಶೆಟ್ಟಿ, ವರಲಕ್ಷ್ಮಿ ಶರತ್ ಕುಮಾರ್, ಸುಧಾ ಬೆಳವಾಡಿ, ಸಂಯುಕ್ತಾ ಹೊರನಾಡು ಹೀಗೆ ಬಹುದೊಡ್ಡ ತಾರಾಗಣವಿದೆ.
ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ಸಿನಿಮಾಗೆ ಮತ್ತೊಂದು ಪ್ಲಸ್ ಪಾಯಿಂಟ್ ಆಗಿದೆ. ಮ್ಯಾಕ್ಸ್ ಸಿನಿಮಾದ ಬಹುತೇಕ ಶೂಟಿಂಗ್ ಮಹಾಬಲಿಪುರಂನಲ್ಲಿ ನಡೆದಿದೆ. ಕಾಲಿವುಡ್ ಸಿನಿರಂಗದ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಮ್ಯಾಕ್ಸ್ ಸಿನಿಮಾ ನಿರ್ಮಿಸಿದ್ದಾರೆ. ಡಿಸೆಂಬರ್ 25ರಂದು ಮ್ಯಾಕ್ಸ್ ಸಿನಿಮಾ ಬಿಡುಗಡೆ ಆಗಲಿದೆ.
ಇದನ್ನೂ ಓದಿ: BBK 11: ಖುಷಿಯಾಗಿರೋ ದೊಡ್ಮನೆಗೆ ಮತ್ತೆ ಎಂಟ್ರಿ ಕೊಡ್ತಾರಾ ಗೋಲ್ಡ್ ಸುರೇಶ್..? ಎಲ್ಲರೂ ಶಾಕ್!!
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.