Nagabandham: ಟಾಲಿವುಡ್ನ ಫ್ಯಾಷನೇಟ್ ಸಿನಿಮಾ ಮೇಕರ್ಗಳಲ್ಲಿ ಒಬ್ಬರಾಗಿರುವ ಅಭಿಷೇಕ್ ನಾಮಾ ಈಗ ಪ್ಯಾನ್ ಇಂಡಿಯನ್ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಡೆವಿಲ್: ದಿ ಬ್ರಿಟಿಷ್ ಸೀಕ್ರೆಟ್ ಏಜೆಂಟ್ ಚಿತ್ರದ ಯಶಸ್ವಿ ನಿರ್ದೇಶನದ ನಂತರ, "ನಾಗಬಂಧಂ- ದಿ ಸೀಕ್ರೆಟ್ ಟ್ರೆಷರ್" ಸಿನಿಮಾದ ಜತೆಗೆ ಅವರ ಎಂಟ್ರಿಯಾಗಿದೆ. ಇಂದು (ಜ. 7) ಈ ಚಿತ್ರದ ಪ್ರಿ-ಲುಕ್ ಪೋಸ್ಟರ್ ಅನಾವರಣಗೊಂಡಿದೆ. ಇದೇ ಚಿತ್ರದ ರುದ್ರನ ಲುಕ್ ಜನವರಿ 13ರಂದು ಚಿತ್ರತಂಡ ರಿವೀಲ್ ಮಾಡಲಿದೆ.
ಅಭಿಷೇಕ್ ನಾಮಾ ನಿರ್ದೇಶನ ಮಾತ್ರವಲ್ಲದೆ, ಈ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನೂ ಬರೆದಿದ್ದಾರೆ. ಅಭಿಷೇಕ್ ಪಿಕ್ಚರ್ಸ್ ಸಹಯೋಗದಲ್ಲಿ NIK ಸ್ಟುಡಿಯೋಸ್ ಬ್ಯಾನರ್ನಲ್ಲಿ ಕಿಶೋರ್ ಅನ್ನಪುರೆಡ್ಡಿ ಮತ್ತು ತಾರಕ್ ಸಿನಿಮಾಸ್ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಲಕ್ಷ್ಮಿ ಇರಾ ಮತ್ತು ದೇವಾಂಶ್ ನಾಮಾ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಈ ಚಿತ್ರದಲ್ಲಿ ತೆಲುಗಿನ ಪೆದ್ದ ಕಾಪು ಚಿತ್ರದ ಮೂಲಕ ಗುರುತಿಸಿಕೊಂಡ ವಿರಾಟ್ ಕರ್ಣ ನಾಯಕನಾಗಿ ನಟಿಸುತ್ತಿದ್ದಾರೆ.
ಸದ್ಯ ರಿವೀಲ್ ಆಗಿರುವ ಪ್ರಿ-ಲುಕ್ ಪೋಸ್ಟರ್ನಲ್ಲಿ ನಾಯಕನು ಪುರಾತನ ದೇವಾಲಯದ ಬೃಹತ್ ಬಾಗಿಲಿನ ಮುಂದೆ ನಿಂತಿರುವುದನ್ನು ಕಾಣಬಹುದು. ಬಾಗಿಲು ಸ್ವಲ್ಪ ತೆರೆದಿರುವುದರಿಂದ, ಒಳಗಿನಿಂದ ಬೆಳಕು ಹೊರಸೂಸುತ್ತಿದೆ. ಅದರಂತೆ ಸಂಕ್ರಾಂತಿ ಹಬ್ಬದ ಜೊತೆಗೆ ಜನವರಿ 13 ರಂದು ಈ ಸಿನಿಮಾದ ಪ್ರಮುಖ ಪಾತ್ರವಾದ ರುದ್ರನನ್ನು ಪರಿಚಯಿಸುವುದಾಗಿ ತಯಾರಕರು ಘೋಷಿಸಿದ್ದಾರೆ. ಸದ್ಯ ಹೈದರಾಬಾದ್ನಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದೆ.
ಪದ್ಮನಾಭಸ್ವಾಮಿ ಮತ್ತು ಪುರಿ ಜಗನ್ನಾಥ ದೇವಾಲಯಗಳಲ್ಲಿ ಪತ್ತೆಯಾದ ನಿಧಿ ಆಧರಿತ ಕಾಲ್ಪನಿಕ ಕಥೆ ಇದಾಗಿದ್ದು, ಅಭಿಷೇಕ್ ನಾಮ ಈ ಸಿನಿಮಾದ ಕಥೆ ಬರೆದಿದ್ದಾರೆ. ನಾಗಬಂಧಂ ಭಾರತದಲ್ಲಿನ 108 ವಿಷ್ಣು ದೇವಾಲಯಗಳ ಸುತ್ತಲಿನ ರಹಸ್ಯವನ್ನು ಸಿನಿಮಾ ಮೂಲಕ ತೆರೆದಿಡಲಿದೆಯಂತೆ. ಆ ನಿಧಿಯನ್ನು ಸರ್ಪಗಳು ರಕ್ಷಿಸುತ್ತಿವೆ ಎಂಬ ನಂಬಿಕೆಯ ಹಿನ್ನೆಲೆಯ ಕಥೆಯೂ ಈ ಚಿತ್ರದ್ದಾಗಿರಲಿದೆ
ನಾಗಬಂಧಂ ಚಿತ್ರದಲ್ಲಿ ನಭಾ ನಟೇಶ್ ಮತ್ತು ಈಶ್ವರ್ಯ ಮೆನನ್ ನಾಯಕಿಯರಾಗಿ ನಟಿಸಿದ್ದಾರೆ ಮತ್ತು ಜಗಪತಿ ಬಾಬು, ಜಯಪ್ರಕಾಶ್, ಮುರಳಿ ಶರ್ಮಾ ಮತ್ತು ಕೆಜಿಎಫ್ ಚಿತ್ರದ ಮೂಲಕ ಖ್ಯಾತಿ ಪಡೆದಿರುವ ಕನ್ನಡದ ನಟ ಅವಿನಾಶ್ ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೌಂದರ್ ರಾಜನ್ ಎಸ್ ಕ್ಯಾಮರಾಮನ್ ಆಗಿದ್ದು, ಅಭೆ ಸಂಗೀತ ನೀಡಿದ್ದಾರೆ. ಕಲ್ಯಾಣ್ ಚಕ್ರವರ್ತಿ ಸಂಭಾಷಣೆ ಬರೆದಿದ್ದು, ಸಂತೋಷ್ ಕಾಮಿರೆಡ್ಡಿ ಸಂಕಲನ ಮಾಡಿದ್ದಾರೆ. ಅಶೋಕ್ ಕುಮಾರ್ ಪ್ರೊಡಕ್ಷನ್ ಡಿಸೈನರ್ ಆಗಿದ್ದಾರೆ.
ನಾಗಬಂಧಂ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, 2025ರಲ್ಲಿ ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಬರೋಬ್ಬರಿ 100 ಕೋಟಿ ಬಜೆಟ್ನಲ್ಲಿ ತಯಾರಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ