#Paaru Parvathy: EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.
ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅನಾವರಣ ಮಾಡಿದ್ದರು. ಟ್ರೇಲರ್ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಜನವರಿ 31 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್ ಅವರು, ಅಡ್ವೆಂಚರ್ ಕಾಮಿಡಿ ಜಾನರ್ ನ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಚಿತ್ರದಲ್ಲಿ ಪ್ರಮುಖ ಪಾತ್ರಧಾರಿ ಎಂದೇ ಹೇಳಲಾಗುತ್ತಿರುವ ಕಾರ್ ಅನ್ನು ಸಹ ಸುದೀಪ್ ಸ್ವತಃ ವೀಕ್ಷಿಸಿದರು. ನಟಿ ದೀಪಿಕಾ ದಾಸ್, ನಿರ್ಮಾಪಕ ಪ್ರೇಂನಾಥ್, ನಿರ್ದೇಶಕ ರೋಹಿತ್ ಕೀರ್ತಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಪ್ರವಾಸ ಕಥನಕ್ಕೆ ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರಕಾಂಡ್ ನಲ್ಲಿ ಚಿತ್ರೀಕರಣ ನಡೆದಿದೆ. ಅಬಿನ್ ರಾಜೇಶ್ ಛಾಯಾಗ್ರಹಣ, ಆರ್ ಹರಿ ಸಂಗೀತ ನಿರ್ದೇಶನ ಹಾಗೂ ಸಿ.ಕೆ.ಕುಮಾರ ಅವರ ಸಂಕಲನ "#ಪಾರು ಪಾರ್ವತಿ" ಚಿತ್ರಕ್ಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.