ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಧಕ್ ಧಕ್ ಸುಂದರಿ ಮಾಧುರಿ ಧೀಕ್ಷಿತ್ ಮದುವೆ ಸುದ್ದಿ ಕೇಳಿ ಬಾತ್ ರೂಮಿನಲ್ಲಿ ಬಿಕ್ಕಳಿಸಿ ಅತ್ತಿದ್ದರಂತೆ ಈ ಸ್ಟಾರ್ ಆಟಗಾರ !
"ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ" ಎಂದು ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್ ಅಧ್ಯಕ್ಷ ಸಾಧುಕೋಕಿಲ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಂಗ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್ ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು. ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು.
ಇದನ್ನೂ ಓದಿ: ಶುಗರ್ ಎಷ್ಟೇ ಹೆಚ್ಚಿದ್ದರೂ ಸುಲಭವಾಗಿ ನಿಯಂತ್ರಿಸಬಲ್ಲ ಮ್ಯಾಜಿಕಲ್ ಪಾನೀಯಗಳಿವು..!
ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಆಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.