Rudra garuda purana: 2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ, ಟೀಸರ್ ಮೂಲಕ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ "ಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆ" ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಕೃಷ್ಣಪ್ರಸಾದ್ ಸಂಗೀತ ನೀಡಿರುವ ಈ ಹಾಡನ್ನು ತಮ್ಮ ಅಮೋಘ ಗಾಯನದ ಮೂಲಕ ಹೆಸರಾಗಿರುವ ಸಂಜಿತ್ ಹೆಗ್ಡೆ ಹಾಗೂ ದೀಪಿಕಾ ವರದರಾಜನ್ ಹಾಡಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟೀಸರ್ ಮೂಲಕ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಜನವರಿ 24ರಂದು ತೆರೆಕಾಣಲಿದೆ.
ಮಿಸ್ಟ್ರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ "ರುದ್ರ ಗರುಡ ಪುರಾಣ"ದಲ್ಲಿ ಪ್ರೇಮ ಕಥೆಯೂ ಇದೆ. ಹೆಸರಾಂತ ನಿರ್ದೇಶಕ ಜೇಕಬ್ ವರ್ಗೀಸ್ ಅವರ ಬಳಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ನಂದೀಶ್ ನಿರ್ದೇಶನದ ಎರಡನೇ ಚಿತ್ರ `ರುದ್ರ ಗರುಡ ಪುರಾಣ. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ವಿಜಯ್ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ನಟಿಸಿದ್ದಾರೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರೀಶ್ ಶಿವಣ್ಣ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.