walnuts to prevent brain stroke: ವಾಲ್ನಟ್ಸ್ ಒಂದು ರುಚಿಕರವಾದ ಮತ್ತು ಪೌಷ್ಟಿಕ ಡ್ರೈಫರೂಟ್ಸ್. ಇದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನೆನೆಸಿದ ವಾಲ್‌ನಟ್ಸ್ ತಿನ್ನುವುದರಿಂದ ಅದರ ಪ್ರಯೋಜನಗಳು ಇನ್ನಷ್ಟು ಹೆಚ್ಚಾಗುತ್ತವೆ. ನೆನೆಸಿದ ವಾಲ್‌ನಟ್ಸ್ ತಿನ್ನುವುದರಿಂದಾಗುವ ಕೆಲವು ಅದ್ಭುತ ಪ್ರಯೋಜನಗಳು ಇಲ್ಲಿವೆ.
ನೆನೆಸಿದ ವಾಲ್‌ನಟ್ಸ್ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ವಾಲ್ನಟ್ಸ್ ಹೆಚ್ಚಿನ ಪ್ರಮಾಣದ ಫೈಬರ್ ಹೊಂದಿರುವ ಕಾರಣ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.
ವಾಲ್‌ನಟ್ಸ್ ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ವಾಲ್‌ನಟ್ಸ್ ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿದ್ದು, ಇದು ಹೃದಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಆಲೂಗಡ್ಡೆ ರಸದಲ್ಲಿ ಈ ಎರಡು ವಸ್ತು ಬೆರೆಸಿ ತಲೆಗೆ ಹಚ್ಚಿ.. ಬಿಳಿ ಕೂದಲು 10 ನಿಮಿಷದಲ್ಲೇ ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತೆ!
ವಾಲ್‌ನಟ್ಸ್ ನೀರಿನಲ್ಲಿ ನೆನೆಸಿ ತಿನ್ನುವುದರಿಂದ ಮಧುಮೇಹವನ್ನು ನಿಯಂತ್ರಿಸಲು ಸಹಾಯವಾಗುತ್ತದೆ.ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ವಾಲ್‌ನಟ್ಸ್ ತಿನ್ನುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯ ಕಡಿಮೆಯಾಗುತ್ತದೆ. ಮೆದುಳಿನ ಆರೋಗ್ಯ ಸುಧಾರಿಸುತ್ತದೆ. ವಾಲ್‌ನಟ್ಸ್ ಆಂಟಿಆಕ್ಸಿಡೆಂಟ್‌ಗಳು ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿದ್ದು, ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಫೈಬರ್ ಮತ್ತು ಪ್ರೋಟೀನ್ ಅಧಿಕವಾಗಿದ್ದು, ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
ನೆನೆಸಿದ ವಾಲ್‌ನಟ್ಸ್ ತಿನ್ನುವುದರಿಂದ ಚರ್ಮ ಮತ್ತು ಕೂದಲಿನ ಆರೋಗ್ಯ ಸುಧಾರಿಸುತ್ತದೆ. ಆಂಟಿಆಕ್ಸಿಡೆಂಟ್ ಗಳು ಮತ್ತು ವಿಟಮಿನ್ ಇ ಇದ್ದು ಚರ್ಮ ಮತ್ತು ಕೂದಲನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ತೂಕ ಇಳಿಸಿಕೊಳ್ಳಲು ಈ ಸೂಪರ್‌ಫುಡ್ ತುಂಬಾನೇ ಪ್ರಯೋಜನಕಾರಿ; ಇದನ್ನ ಯಾವಾಗ ಮತ್ತು ಹೇಗೆ ತಿನ್ನಬೇಕೆಂದು ತಿಳಿಯಿರಿ
ಮೂಳೆಗಳನ್ನು ಬಲಪಡಿಸುತ್ತದೆ. ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ ಸಮೃದ್ಧವಾಗಿದೆ. ಮೂಳೆಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇದು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನೆನೆಸಿದ ವಾಲ್ನಟ್ಸ್ ತಿನ್ನುವುದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೆಗ್ನೀಸಿಯಮ್ ಅನ್ನು ಹೊಂದಿರುತ್ತದೆ, ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ನಿದ್ರೆಯನ್ನು ಸುಧಾರಿಸಲು ಸಹ ಸಹಾಯ ಮಾಡುತ್ತದೆ.
ರಾತ್ರಿಯಿಡೀ 4-5 ವಾಲ್‌ನಟ್ಸ್ ನೀರಿನಲ್ಲಿ ನೆನೆಸಿಡಿ. ನೆನೆಸಿದ ವಾಲ್‌ನಟ್ಸ್ ಅನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಿರಿ. ನಿಮ್ಮ ನೆಚ್ಚಿನ ಸ್ಮೂಥಿ ಅಥವಾ ಓಟ್ಸ್‌ಗೆ ನೆನೆಸಿದ ವಾಲ್‌ನಟ್‌ಗಳನ್ನು ಕೂಡ ಸೇರಿಸಬಹುದು.
Disclaimer: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರ ಮತ್ತು ಇದನ್ನು ವೃತ್ತಿಪರ ವೈದ್ಯಕೀಯ ಸಲಹೆ ಎಂದು ಅರ್ಥೈಸಿಕೊಳ್ಳಬಾರದು. ಯಾವುದೇ ಸಮಸ್ಯೆಗಳಿದ್ದರೆ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಇದಕ್ಕೆ ಹೊಣೆಯಲ್ಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.