Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆ 2025 ಕ್ಕೆ ಮತದಾನ ಆರಂಭವಾಗಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ. ಫೆಬ್ರವರಿ 8ರಂದು ಕೌಂಟಿಂಗ್ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ವೋಟಿಂಗ್ ಆರಂಭಗೊಂಡಿದೆ. ಸಂಜೆ 6 ಗಂಟೆಗೆ ಮತದಾನ ಕೊನೆಗೊಳ್ಳಲಿದೆ.
ದೆಹಲಿ ಎಕ್ಸಿಟ್ ಪೋಲ್ 2025:
ದೆಹಲಿ ವಿಧಾನಸಭಾ ಚುನಾವಣೆ 2025 ರ ಎಕ್ಸಿಟ್ ಪೋಲ್ ಕುರಿತು ಚುನಾವಣಾ ಆಯೋಗವು ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುವ ದಿನವಾದ ಫೆಬ್ರವರಿ 5 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6:30 ರವರೆಗೆ ನಿರ್ಗಮನ ಸಮೀಕ್ಷೆಗಳ ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ಆಯೋಗ ನಿಷೇಧಿಸಿದೆ.
ಈ ನಿರ್ದೇಶನವು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬರುತ್ತದೆ. ಇದು ನ್ಯಾಯಯುತ ಮತ್ತು ನಿಷ್ಪಕ್ಷಪಾತ ಚುನಾವಣಾ ಪ್ರಕ್ರಿಯೆಯನ್ನು ಖಚಿತಪಡಿಸುತ್ತದೆ. ದೆಹಲಿ ಎಕ್ಸಿಟ್ ಪೋಲ್ ಫೆಬ್ರವರಿ 5 ರಂದು ಸಂಜೆ 6.30 ರ ಸುಮಾರಿಗೆ ಪ್ರಕಟಗೊಳ್ಳಬಹುದು.
ಇದನ್ನೂ ಓದಿ: Daily GK Quiz: ಮನುಷ್ಯರಲ್ಲಿ ಎಷ್ಟನೇ ವಯಸ್ಸಿಗೆ ಬುದ್ಧಿವಂತ ಹಲ್ಲು ಕಾಣಿಸಿಕೊಳ್ಳುತ್ತದೆ?
ಅಧಿಸೂಚನೆಯ ಪ್ರಕಾರ, ಮತದಾನ ಮುಗಿಯುವ 48 ಗಂಟೆಗಳ ಮೊದಲು ಯಾವುದೇ ಅಭಿಪ್ರಾಯ ಸಮೀಕ್ಷೆ ಅಥವಾ ಸಮೀಕ್ಷೆಯ ಫಲಿತಾಂಶಗಳು ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಪ್ರದರ್ಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದರಲ್ಲಿ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದೂ ಸೇರಿದೆ.
70 ಕ್ಷೇತ್ರಗಳಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಬಾರಿಯೂ ಪೈಪೋಟಿ ಜೋರಾಗಿದೆ. ಯಾವ ಪಕ್ಷ ಮೇಲುಗೈ ಸಾಧಿಸುತ್ತದೆ ಎಂಬುದನ್ನು ನೋಡಲು ಮತದಾರರು ಕಾತರದಿಂದ ಕಾಯುತ್ತಿದ್ದಾರೆ.
ಕ್ಯೂ ಮ್ಯಾನೇಜ್ಮೆಂಟ್ ಸಿಸ್ಟಮ್ ಆಪ್ :
ದೆಹಲಿ ವಿಧಾನಸಭಾ ಚುನಾವಣೆಯ 70 ಕ್ಷೇತ್ರಗಳು ಸೇರಿ ಒಟ್ಟು 1.56 ಕೋಟಿ ಮತದಾರರಿದ್ದಾರೆ. 13,766 ಮತಗಟ್ಟೆಗಳಲ್ಲಿ 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗ ಮತದಾರರು ಇದ್ದಾರೆ. ಅಂಗವಿಕಲ ಮತದಾರರಿಗಾಗಿ 733 ಮತಗಟ್ಟೆಗಳನ್ನು ರಚಿಸಲಾಗಿದೆ. ದೆಹಲಿಯಲ್ಲಿ ಗರಿಷ್ಠ ಮತದಾನ ನಡೆಯುವ ನಿರೀಕ್ಷೆಯನ್ನು ಚುನಾವಣಾ ಆಯೋಗ ವ್ಯಕ್ತಪಡಿಸಿದೆ. ಕ್ಯೂ ಮ್ಯಾನೇಜ್ಮೆಂಟ್ ಸಿಸ್ಟಮ್ ಆಪ್ ಅನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮತದಾರರು ತಮ್ಮ ಮತಗಟ್ಟೆಯಲ್ಲಿ ಎಷ್ಟು ಜನಸಂದಣಿ ಇದೆ ಎಂಬುದನ್ನು ಕುಳಿತಲ್ಲಿಯೇ ಚೆಕ್ ಮಾಡಬಹುದಾಗಿದೆ.
ದೆಹಲಿಯಲ್ಲಿ ತ್ರಿಕೋನ ಸ್ಪರ್ಧೆ :
ಈ ಬಾರಿ ದೆಹಲಿಯಲ್ಲಿ ದೆಹಲಿಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆಮ್ ಆದ್ಮಿ ಪಕ್ಷ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ. ಮೂರೂ ಪಕ್ಷಗಳ ಸ್ಟಾರ್ ಪ್ರಚಾರಕರು ಭರ್ಜರಿ ಮತಬೇಟೆಯಾಡಿದ್ದಾರೆ.
ಇದನ್ನೂ ಓದಿ: ಸರ್ಕಾರದಿಂದ 48 ಕೋಟಿ ಶಿಕ್ಷಣ ಸಾಲ ಮನ್ನಾ!...... ಯಾರಿಗೆಲ್ಲ ಆಗಿದೆ, ಇಲ್ಲಿದೆ ನೋಡಿ
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.