Arvind Kejriwal: ಇಡಿ ದಾಳಿಗಳ ನಡುವೆ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ನೀಡಿದ ಗೋವಾ ಹೈಕೋರ್ಟ್

Goa High Court relief Arvind Kejriwal: 2017ರ ಗೋವಾ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ಗೋವಾ ಹೈಕೋರ್ಟ್ ರದ್ದುಗೊಳಿಸಿದೆ.

Written by - Yashaswini V | Last Updated : Feb 6, 2024, 02:54 PM IST
  • ಇಡಿ ದಾಳಿಯ ನಡುವೆ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್
  • ಅರವಿಂದ್ ಕೇಜ್ರಿವಾಲ್ ಅವರಿಗೆ ಕೆಳ ನ್ಯಾಯಾಲಯ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದೆ ಗೋವಾ ಹೈಕೋರ್ಟ್
Arvind Kejriwal: ಇಡಿ ದಾಳಿಗಳ ನಡುವೆ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ನೀಡಿದ ಗೋವಾ ಹೈಕೋರ್ಟ್  title=

Arvind Kejriwal ED raids Goa High Court: ಗೋವಾ ಹೈಕೋರ್ಟ್‌ನಿಂದ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಿಗ್ ರಿಲೀಫ್ ಒಂದು ಸಿಕ್ಕಿದೆ. ನಿರಂತರ ಇಡಿ ಸಮನ್ಸ್ ಮತ್ತು ಅವರ ಪಕ್ಷದ ನಾಯಕರ ಮನೆಗಳ ಮೇಲೆ ಇಡಿ ದಾಳಿಗಳ ನಡುವೆ  ದೆಹಲಿ ಸಿಎಂಗೆ ನೀಡಲಾಗಿದ್ದ ಸಮನ್ಸ್ ಅನ್ನು ಗೋವಾ ಹೈಕೋರ್ಟ್ ರದ್ದುಗೊಳಿಸಿದೆ. 

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧದ ವಿಚಾರಣೆಗೆ ಸಂಬಂಧಿಸಿದಂತೆ ನೀಡಲಾಗಿದ್ದ ಸಮನ್ಸ್ ಅನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಮಂಗಳವಾರ (ಫೆ.6)  ರದ್ದುಗೊಳಿಸಿದೆ.

ಇದನ್ನೂ ಓದಿ- Railway Recruitment 2024: 6,000 ಖಾಲಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ಇಲ್ಲಿದೆ

2017 ರ ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಲ್ಲಿಸಲಾದ ದೂರಿಗೆ ಸಂಬಂಧಿಸಿದಂತೆ ಗೋವಾದ ಬಾಂಬೆ ಹೈಕೋರ್ಟ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದೆ ಎಂದು ಎಎಪಿ ಗೋವಾ ಮುಖ್ಯಸ್ಥ ಅಮಿತ್ ಪಾಲೇಕರ್ ಹೇಳಿದ್ದಾರೆ.

ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ, ಮಾಪುಸಾ ಅವರು ಕೇಜ್ರಿವಾಲ್ ಅವರ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 (ಇ) ಅಡಿಯಲ್ಲಿ ಲಂಚಕ್ಕೆ ಸಂಬಂಧಿಸಿದ ಆರೋಪಪಟ್ಟಿಗೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್ ನೀಡಿದ್ದರು.

ಇದನ್ನೂ ಓದಿ- Budget Session 2024: ಲೋಕಸಭಾ ಚುನಾವಣೆಯಲ್ಲಿ BJP 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಪ್ರಧಾನಿ ಮೋದಿ

ಕಳೆದ ವರ್ಷ ನವೆಂಬರ್‌ನಲ್ಲಿ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದಾಗ ಜೆಎಂಎಫ್‌ಸಿ ಮುಂದೆ ಪ್ರತಿನಿಧಿಸಿದ್ದರು. ಈ ಸಂದರ್ಭದಲ್ಲಿ ಸಮನ್ಸ್ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಮಯಾವಕಾಶ ಕೋರಲಾಗಿತ್ತು ಎಂದು ಪಾಲೇಕರ್ ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News