ನನಸಾಯಿತು ಬಹುದಿನಗಳ ಕನಸು: ಮಂಡ್ಯದಲ್ಲಿ ನೂತನ ಕೃಷಿ-ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರದ ಅಧಿಕೃತ ಅನುಮೋದನೆ

2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಆದೇಶ ಹೊರಬಿದ್ದಿದೆ. ಕೃಷಿ ಸಚಿವರ ವಿಶೇಷ ಕಾಳಜಿ, ನಿರಂತರ ಪರಿಶ್ರಮ ಶೀಘ್ರವೇ ಫಲ ನೀಡಿದೆ.

Written by - Prashobh Devanahalli | Last Updated : Jan 29, 2025, 05:12 PM IST
    • ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆ
    • ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ
    • ಕೃಷಿ ಸಚಿವರ ವಿಶೇಷ ಕಾಳಜಿ, ನಿರಂತರ ಪರಿಶ್ರಮ ಶೀಘ್ರವೇ ಫಲ ನೀಡಿದೆ.
ನನಸಾಯಿತು ಬಹುದಿನಗಳ ಕನಸು: ಮಂಡ್ಯದಲ್ಲಿ ನೂತನ ಕೃಷಿ-ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರದ ಅಧಿಕೃತ ಅನುಮೋದನೆ title=
File Photo

ಬೆಂಗಳೂರು: ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ.

ಇದನ್ನೂ ಓದಿ: ಭವ್ಯ ಬಂಗಲೆ.. ಐಷಾರಾಮಿ ಕಾರು, ಪ್ರೊಡಕ್ಷನ್‌ ಹೌಸ್ ಒಡತಿ.. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿರುವ ಒಟ್ಟು ಆಸ್ತಿ ಆಸ್ತಿ ಎಷ್ಟು ಕೋಟಿ ?

2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಆದೇಶ ಹೊರಬಿದ್ದಿದೆ. ಕೃಷಿ ಸಚಿವರ ವಿಶೇಷ ಕಾಳಜಿ, ನಿರಂತರ ಪರಿಶ್ರಮ ಶೀಘ್ರವೇ ಫಲ ನೀಡಿದೆ.

ಇದಕ್ಕಾಗಿ ಚಲುವರಾಯಸ್ವಾಮಿರವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ನೂತನ ಬಜೆಟ್ ಘೋಷಣೆಯಂತೆ ಬೆಂಗಳೂರು ಕೃಷಿ ವಿ.ವಿಯ ವಿಶ್ರಾಂತಿ ಕುಲಪತಿ ಡಾ||ರಾಜೇಂದ್ರಪ್ರಸಾದ್‌ರವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ತಂಡವು ಹಲವು ಭಾರಿ ಸ್ಥಳ ಪರಿಶೀಲಿಸಿ, ಸಭೆಗಳನ್ನು ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು

ಸಮಿತಿಯ ಅಭಿಪ್ರಾಯವನ್ನು ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಂದಿಟ್ಟು ಅನುಮೋದನೆ ಪಡೆದ ನಂತರ ಸರ್ಕಾರ ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕಾಲುವ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿದೆ.

ಆರ್ಥಿಕ ಇಲಾಖೆ ಕೂಡ ಮಂಡ್ಯದ ವಿಸಿ ಫಾರಂನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಾತ್ವಿಕ ಅನುಮತಿ ನೀಡಿ ವಿಶ್ವವಿದ್ಯಾಲಯಕ್ಕೆ ಹಂತ ಹಂತವಾಗಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿಸ್ತೃತ ಅಂದಾಜು ಹಾಗೂ ಆವರ್ತಕ ವೆಚ್ಚದ ಅಂದಾಜನ್ನು ಸಲ್ಲಿಸಲು ತಿಳಿಸಿದೆ.

ಈ ಎಲ್ಲಾ ಅಂಶಗಳ ಆಧಾರದ ಮೇರೆಗೆ ಸರ್ಕಾರವು ಮಂಡ್ಯ ಜಿಲ್ಲೆಯ ವಿಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪಿಸಲು ಅನುಮೋದನೆ ನೀಡಿದೆ. ಷರತ್ತು ನಿಬಂಧನೆಗಳು ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ಮುಂದಿನ ಆದೇಶದಲ್ಲಿ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.

ಇದನ್ನೂ ಓದಿ: ಕಿಚ್ಚನ ಬಳಿಕ ಈ ಸ್ಟಾರ್‌ ಆಂಕರ್‌ಗೆ ಬಿಗ್‌ ಬಾಸ್‌ ಹೋಸ್ಟ್‌ ಮಾಡಲು ಆಫರ್‌! ಸಿನಿಮಾಗಾಗಿ ಅಲ್ಲ ಸುದೀಪ್‌ ಬಿಗ್‌ ಬಾಸ್‌ ಬಿಡಲು ಅಸಲಿ ಕಾರಣವೇ ಇದು! ಶೋ ಮುಗಿದು 2 ದಿನದ ಬಳಿಕ ಹೊರಬಿತ್ತು ನಿಜವಾದ ಸಂಗತಿ !

ಶೀಘ್ರವೇ ವಿಶೇಷಾಧಿಕಾರಿಗಳನ್ನು ನೇಮಿಸಿ ಪ್ರಸಕ್ತ ಸಾಲಿನಲ್ಲಿಯೇ ವಿ.ವಿ ಕಾರ್ಯಾರಂಭ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ತಿಳಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News