ನವದೆಹಲಿ: ಛತ್ತೀಸ್ಗಢ (Chhattisgarh) ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು ಮುಂದೆ ವಾರದಲ್ಲಿ 5 ದಿನ ಮಾತ್ರ ವರ್ಕಿಂಗ್ ಡೇ ಘೋಷಿಸಿದೆ. ಅಲ್ಲದೆ ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು ಶೇ.10 ರಿಂದ ಶೇ.14ಕ್ಕೆ ಹೆಚ್ಚಿಸುವುದಾಗಿ ತಿಳಿಸಿದೆ.
ಛತ್ತೀಸ್ಗಢ ಸರ್ಕಾರವು 73ನೇ ಗಣರಾಜ್ಯೋತ್ಸವದ (Republic Day) ಸಂದರ್ಭದಲ್ಲಿ ಹಲವಾರು ಘೋಷಣೆಗಳನ್ನು ಮಾಡಿದೆ. ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
"ಸರ್ಕಾರಿ ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಛತ್ತೀಸ್ಗಢ ಸರ್ಕಾರವು ಐದು ದಿನಗಳ ಕೆಲಸದ ವಾರವನ್ನು ಜಾರಿಗೊಳಿಸುತ್ತಿದೆ. ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು 10 ಪ್ರತಿಶತದಿಂದ 14 ಪ್ರತಿಶತಕ್ಕೆ ಹೆಚ್ಚಿಸಲಾಗುವುದು" ಎಂದು ತಿಳಿಸಿದ್ದಾರೆ.
ವಸತಿ ಪ್ರದೇಶಗಳಲ್ಲಿ ಕೈಗೊಳ್ಳಲಾಗುತ್ತಿರುವ ಸಣ್ಣ ವಾಣಿಜ್ಯ ಚಟುವಟಿಕೆಗಳಿಗೆ ನ್ಯಾಯಸಮ್ಮತತೆಯನ್ನು ಒದಗಿಸುವ ಶಾಸನವನ್ನು ಸಹ ರಾಜ್ಯ ಸರ್ಕಾರವು ಪರಿಚಯಿಸುತ್ತದೆ. ಸಾವಿರಾರು ಸಣ್ಣ ಉದ್ಯಮಿಗಳಿಗೆ ಇದು ಪ್ರಯೋಜನವನ್ನು ನೀಡುತ್ತದೆ.
ಉದ್ಯೋಗ ಸೃಷ್ಟಿಸಲು ಹಾಗೂ ಸಾರಿಗೆ ಇಲಾಖೆ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲು ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯ ಸಾರಿಗೆ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಇದರೊಂದಿಗೆ ಲರ್ನಿಂಗ್ ಡ್ರೈವಿಂಗ್ ಲೈಸೆನ್ಸ್ (Driving License) ನೀಡುವ ನಿಯಮಗಳನ್ನು ಸರಳೀಕರಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.
ರೈತರಿಗೆ ಪ್ರಮುಖ ಘೋಷಣೆಯಾಗಿ, ಎಫ್ವೈ 2022-23 ರಿಂದ ಬೇಳೆಕಾಳುಗಳನ್ನು ಎಂಎಸ್ಪಿಯಲ್ಲಿ ಖರೀದಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಅಲ್ಲದೆ, ಮೊದಲ ಎರಡು ಹೆಣ್ಣು ಮಕ್ಕಳಿಗೆ ನೋಂದಾಯಿತ ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ ರೂ. 20,000 ಠೇವಣಿ ಇಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: Republic Day 2022: ರಫೇಲ್ ಫೈಟರ್ ಜೆಟ್ ಮೊದಲ ಮಹಿಳಾ ಪೈಲಟ್ ಇವರೇ ನೋಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.