Madhya Pradesh IT Raid: ಬಿಜೆಪಿ ಮಾಜಿ ಕಾರ್ಪೊರೇಟರ್ ಮನೆಯ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಹೌಹಾರಿಹೋಗಿರುವ ಘಟನೆ ನಡೆದಿದೆ. ದಾಳಿ ವೇಳೆ ನಾಲ್ಕು ಮೊಸಳೆಗಳು ಪತ್ತೆಯಾಗಿವೆ.
ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಿಜೆಪಿ ನಾಯಕನ ಮನೆಯಲ್ಲಿಯೇ ಮೊಸಳೆಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 'ಬೀಡಿ ತಯಾರಿಕೆ, ಕಟ್ಟಡ ನಿರ್ಮಾಣ ಗುತ್ತಿಗೆದಾರ ಆಗಿರುವ ಬಿಜೆಪಿಯ ಮಾಜಿ ಕಾರ್ಪೋರೇಟರ್ ರಾಜೇಶ್ ಕೇಸರವಾಣಿ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವೇಳೆ ಮೊಸಳೆಗಳು ಪತ್ತೆಯಾಗಿವೆ.
ಇದನ್ನೂ ಓದಿ: ಮದ್ಯ ಪ್ರಿಯರಿಗೆ ಬಿಗ್ ಶಾಕ್.. ರಾಜ್ಯದಲ್ಲಿ ಕಣ್ಮರೆಯಾಗಲಿದೆ ಬಿಯರ್!? ಏಕಾಏಕಿ ಮಾರಾಟ ಸ್ಥಗಿತಕ್ಕೆ ಕಾರಣವೇನು?
ಈ ಕುರಿತು ರಾಜೇಶ್ ಯಾವುದೇ ರೀತಿಯ ಮಾಹಿತಿ ನೀಡಿಲ್ಲವೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ʼಮೊಸಳೆಗಳು ಇರುವ ಬಗ್ಗೆ ಐಟಿ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿ ಮೊಸಳೆಗಳನ್ನು ರಕ್ಷಣೆ ಮಾಡಲಾಗಿದೆ. ಬಿಜೆಪಿ ನಾಯಕ ರಾಜೇಶ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ' ಎಂದು ಅರಣ್ಯ ಇಲಾಖೆ ಅಧಿಕಾರಿ ಅಸೀಮ್ ಶ್ರೀವಾಸ್ತವ್ ತಿಳಿಸಿದ್ದಾರೆ.
ಸದ್ಯ ಎಲ್ಲಾ ಮೊಸಳೆಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಶ್ರೀವಾಸ್ತವ್ ಹೇಳಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಪತ್ತೆಯಾಗುವುದು ಸಹಜ, ಆದರೆ ಬಿಜೆಪಿ ನಾಯಕನ ಮನೆಯಲ್ಲಿ ನಾಲ್ಕು ಮೊಸಳೆಗಳು ಪತ್ತೆಯಾಗಿರುವ ವಿಷಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಗೆ ಗ್ರಾಸವಾಗಿದೆ.
₹155 ಕೋಟಿ ತೆರಿಗೆ ವಂಚನೆ!!
ರಾಜೇಶ್ ₹155 ಕೋಟಿ ತೆರಿಗೆ ವಂಚನೆ ಮಾಡಿದ್ದನ್ನು ಅಧಿಕಾರಿಗಳು ಪತ್ತೆ ಹಚ್ಚಿ ₹3 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನಾಭರಣ, ಬೆಳ್ಳಿ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಟ್ಟಡ ನಿರ್ಮಾಣ ವ್ಯವಹಾರ ನಡೆಸುತ್ತಿದ್ದ ಬಿಜೆಪಿಯ ಮಾಜಿ ಶಾಸಕರು ಬರೋಬ್ಬರಿ ₹140 ಕೋಟಿ ತೆರಿಗೆ ವಂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ನೂರಾರು ಜನರ ಮಧ್ಯ ಯುವತಿಯ ಭೀಕರ ಹತ್ಯೆ..! ನೋಡುತ್ತ ಮಜಾ ತೆಗೆದುಕೊಂಡ ಜನ.. ವಿಡಿಯೋ ವೈರಲ್..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.