ಕೇರಳ: ಪೂರ್ವಜರಿಗೆ, ಪುಲ್ವಾಮಾ ದಾಳಿ ಸಂತ್ರಸ್ತರಿಗಾಗಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕೇರಳದ ತಿರುನೆಲ್ಲಿ ದೇವಾಲಯಕ್ಕೆ ಭೇಟಿ ನೀಡಿ ತಮ್ಮ ವಂಶದ ಪೂರ್ವಜರಿಗೆ, ಪುಲ್ವಾಮಾ ದಾಳಿ ಸಂತ್ರಸ್ತರಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

Last Updated : Apr 17, 2019, 01:41 PM IST
ಕೇರಳ: ಪೂರ್ವಜರಿಗೆ, ಪುಲ್ವಾಮಾ ದಾಳಿ ಸಂತ್ರಸ್ತರಿಗಾಗಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ title=

ವೈನಾಡು: ವೈನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕೇರಳದ ತಿರುನೆಲ್ಲಿ ದೇವಾಲಯಕ್ಕೆ ಭೇಟಿ ನೀಡಿ ತಮ್ಮ ವಂಶದ ಪೂರ್ವಜರಿಗೆ, ಪುಲ್ವಾಮಾ ದಾಳಿ ಸಂತ್ರಸ್ತರಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ವೇಳೆ ರಾಹುಲ್ ಗಾಂಧಿಗೆ ಸಾಥ್​ ನೀಡಿದ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ. ಸಿ. ವೇಣುಗೋಪಾಲ್​​, ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಬಾರಿ ಕೂಡ ರಾಹುಲ್ ಗಾಂಧಿ ಅವರು ಇಲ್ಲಿಗೆ ಬರಬೇಕು ಎಂದುಕೊಂಡಿದ್ದರು. ಆದರೆ ಭದ್ರತಾ ನಿರ್ಬಂಧನೆಗಳ ಕಾರಣ ಬರಲು ಆಗಿರಲಿಲ್ಲ. ಇಲ್ಲಿನ ಪಾಪನಾಶಿನಿ ನದಿಯಲ್ಲೇ ರಾಜೀವ್​ ಗಾಂಧಿ ಅವರ ಚಿತಾಭಸ್ಮ ವಿಸರ್ಜನೆ ಮಾಡಲಾಗಿದೆ ಎಂದು ವೇಣುಗೋಪಾಲ್ ಹೇಳಿದರು.

ಪೂಜಾರಿಯ ನಿರ್ದೇಶನದಂತೆ ರಾಹುಲ್ ಗಾಂಧಿ ತಮ್ಮ ಅಜ್ಜಿ(ಇಂದಿರಾ ಗಾಂಧಿ), ತಂದೆ ಹಾಗೂ ಇತರ ಹಿರಿಯರಿಗೆ, ಪುಲ್ವಾಮಾ ದಾಳಿ ಸಂತ್ರಸ್ತರಿಗಾಗಿ ಪೂಜೆ ಸಲ್ಲಿಸಿದರು. ಬಳಿಕ ಕೇರಳದ ಅಲ್ಲಪ್ಪುಜಾ, ತಿರುವನಂತಪುರಂ​​ನಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.

ಉತ್ತರಪ್ರದೇಶದ ಅಮೇಥಿಯಲ್ಲಿ ಸದಾ ಚುನಾವಣೆಗೆ ಸ್ಪರ್ಧಿಸುತ್ತಿದ್ದ ರಾಹುಲ್ ಈ ಬಾರಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿದ್ದಾರೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಐ.ಶಾನವಾಜ್ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಪಕ್ಷದ ಕಾರ್ಯಕರ್ತರ ಒತ್ತಾಯದ ಮೇರೆಗೆ ರಾಹುಲ್ ಸ್ಪರ್ಧಿಸುತ್ತಿದ್ದಾರೆ. 
 

Trending News