35 ಬೇಸಿಸ್ ಅಂಕಗಳಷ್ಟು ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನಾಲ್ಕನೇ ಬಾರಿ ರೆಪೋ ದರವನ್ನು ಕಡಿತಗೊಳಿಸಿದೆ.  

Last Updated : Aug 7, 2019, 02:20 PM IST
35 ಬೇಸಿಸ್ ಅಂಕಗಳಷ್ಟು ರೆಪೋ ದರ ಕಡಿತಗೊಳಿಸಿದ ಆರ್‌ಬಿಐ title=

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸತತ ನಾಲ್ಕನೇ ಬಾರಿಗೆ ರೆಪೋ ದರವನ್ನು ಕಡಿತಗೊಳಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಆರ್ಥಿಕ ನೀತಿ ಸಮಿತಿ ಇಂದು 35 ಬೇಸಿಸ್ ಅಂಕಗಳಷ್ಟು ಅಥವಾ 0.35% ರೆಪೋ ದರವನ್ನು ಇಳಿಕೆ ಮಾಡಿದೆ. 

ಇದರಿಂದ ಶೇ. 5.75ರಷ್ಟಿದ್ದ ರೆಪೋದರ 5.40 ಮತ್ತು ರಿವರ್ಸ್ ರೆಪೊ ದರವನ್ನು 5.50 ಪ್ರತಿಶತದಿಂದ 5.15 ಕ್ಕೆ ಇಳಿಸಲಾಗಿದೆ. ಈ ವರ್ಷ ಇಲ್ಲಿಯವರೆಗೆ, ರೆಪೊ ದರವನ್ನು ಶೇಕಡಾ 1.10 ರಷ್ಟು ಕಡಿತಗೊಳಿಸಲಾಗಿದೆ. ಕಳೆದ ಒಂಬತ್ತು ವರ್ಷಗಳಲ್ಲಿಯೇ ಇದು ಅತ್ಯಂತ ಕಡಿಮೆ ರೆಪೋ ದರವಾಗಿದೆ.

ರೆಪೋ ದರ ಇಳಿಕೆಯಿಂದ ಗೃಹ ಸಾಲದ ಬಡ್ಡಿ ಕಡಿತ:
ಗೃಹ ಮತ್ತು ವಾಹನ ಸಾಲಗಳು ಆರ್‌ಬಿಐನ ರೆಪೋ ದರಕ್ಕೆ ಅನುಗುಣವಾಗಿ ಬದಲಾಗುತ್ತಿರುತ್ತದೆ. ಆರ್‌ಬಿಐ ರೆಪೋ ದರ ಕಡಿಮೆಯಾದಾಗ ಬ್ಯಾಂಕುಗಳು ಸಾಲಗಾರರಿಗೆ ಕಡಿಮೆ ಬಡ್ಡಿದರ ವಿಧಿಸುತ್ತವೆ. ಹೀಗಾಗಿ ಬ್ಯಾಂಕುಗಳು ಮನೆ ಹಾಗೂ ವಾಹನ ಸಾಲಗಳ ಮೇಲಿನ ಬಡ್ಡಿ ದರಗಳನ್ನು ಇಳಿಕೆ ಮಾಡುವ ಸಾಧ್ಯತೆಯಿದ್ದು, ಮಧ್ಯಮವರ್ಗದವರಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಇಎಂಐ ಕೂಡಾ ಕಡಿಮೆಯಾಗಲಿದೆ.

ರೆಪೋ ದರ ಎಂದರೇನು?
ಆರ್​ಬಿಐ ಇತರ ವಾಣಿಜ್ಯ ಬ್ಯಾಂಕುಗಳಿಗೆ ಸಾಲ ನೀಡುವ ದರವನ್ನು ರೆಪೋ ದರ ಎಂದು ಕರೆಯಲಾಗುತ್ತದೆ.

Trending News