ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಸಿಆರ್ಪಿಎಫ್, ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಇಬ್ಬರು ಭಯೋತ್ಪಾದಕರ ಮೃತ ದೇಹಗಳನ್ನು ಚೇತರಿಸಿಕೊಳ್ಳಲಾಗಿದ್ದು, ಭಯೋತ್ಪಾದಕರ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
Shopian: 3 terrorists killed in an encounter between terrorists & security forces in Keller area. Weapons also recovered. Operation in progress. CRPF, Army & J&K police had launched a joint operation in the early hours today.#JammuAndKashmir (visuals deferred by unspecified time) pic.twitter.com/dZpwwhxzBh
— ANI (@ANI) March 28, 2019
ಶೋಪಿಯಾನ್ ಪ್ರದೇಶದಲ್ಲಿ ಕೆಲ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಸೈನ್ಯ, ಸಿಆರ್ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಏತನ್ಮಧ್ಯೆ, ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈ ವೇಳೆ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಸದೆ ಬಡಿಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶೋಧ ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶೋಪಿಯನ್ನಲ್ಲಿ ಇಂಟರ್ನೆಟ್ ಸೇವೆಗಳನ್ನು ಬಂದ್ ಮಾಡಲಾಗಿದೆ.