Up Govt: ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಮಾರಾಟ ಮಾಡದಂತೆ ಹೊಸ ನಿಯಮ ಜಾರಿಗೆ ತರಲಾಗಿದೆ. ಯುಪಿ ಸರ್ಕಾರವು ಪೆಟ್ರೋಲ್ ಬಂಕ್ಗಳ ಮಾಲೀಕರು ಮತ್ತು ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ. ಜನವರಿ 8 ರಂದು, ಯುಪಿ ಸಾರಿಗೆ ಆಯುಕ್ತ ಬ್ರಜೇಶ್ ನಾರಾಯಣ ಸಿಂಗ್ ಅವರು 75 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಈ ನಿಬಂಧನೆಯ ಕಟ್ಟುನಿಟ್ಟಾದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ಪತ್ರಗಳನ್ನು ಕಳುಹಿಸಿದ್ದಾರೆ. ದ್ವಿಚಕ್ರ ವಾಹನದ ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳುವವರಿಗೂ ಹೆಲ್ಮೆಟ್ ನಿಯಮಗಳು ಅನ್ವಯವಾಗಲಿದೆ. ವಾಹನ ಸವಾರರಿಗೆ ಹೆಲ್ಮೆಟ್ ಬಳಕೆ ಬಗ್ಗೆ ತಿಳುವಳಿಕೆ ನೀಡಲು ನೋ ಹೆಲ್ಮೆಟ್ ನೋ ಪೆಟ್ರೋಲ್ ಬೋರ್ಡ್ ಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ.
ಇದನ್ನೂ ಓದಿ-ಸ್ನಾನ ಮಾಡುತ್ತಿರುವ ಫೋಟೋಸ್ ಹಂಚಿಕೊಂಡ ಸ್ಟಾರ್ ನಟಿ..! ದೃಶ್ಯ ನೋಡಿ ಶಾಕ್ ಆದ ಫ್ಯಾನ್ಸ್...
ವರದಿ ಪ್ರಕಾರ ಯುಪಿ ರಾಜ್ಯದಲ್ಲಿ ಪ್ರತಿ ವರ್ಷ 25-26 ಸಾವಿರ ಜನರು ರಸ್ತೆ ಅಪಘಾತಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಪೈಕಿ ದ್ವಿಚಕ್ರ ವಾಹನಗಳ ಅಪಾಯ ಹೆಚ್ಚು. ಹೆಲ್ಮೆಟ್ ಧರಿಸದೇ ಇರುವುದೇ ಈ ಅವಘಡಗಳಿಗೆ ಕಾರಣ ಎಂದು ಹೊಸ ನಿಯಮವನ್ನು ಪ್ರಸ್ತಾಪಿಸಲಾಗಿದೆ. ಇತ್ತೀಚೆಗಷ್ಟೇ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತಗಳಲ್ಲಿ ಪ್ರಾಣಹಾನಿಯನ್ನು ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ವಿಶೇಷವಾಗಿ ರಾಜ್ಯದ ನಗರ ಪ್ರದೇಶಗಳಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಹೆಲ್ಮೆಟ್ ಕಡ್ಡಾಯಗೊಳಿಸುವ ಮೂಲಕ ಪ್ರತಿ ವರ್ಷ ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವಿನ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ಯುಪಿ ಸರ್ಕಾರ ಆಶಿಸಿದೆ.
ಇದನ್ನೂ ಓದಿ-ಸ್ನಾನ ಮಾಡುತ್ತಿರುವ ಫೋಟೋಸ್ ಹಂಚಿಕೊಂಡ ಸ್ಟಾರ್ ನಟಿ..! ದೃಶ್ಯ ನೋಡಿ ಶಾಕ್ ಆದ ಫ್ಯಾನ್ಸ್...
ರಸ್ತೆ ಅಪಘಾತಗಳಲ್ಲಿ ಪ್ರಾಣಹಾನಿ ತಡೆಯಲು ಯುಪಿ ಸಾರಿಗೆ ಇಲಾಖೆ ಕೈಗೊಂಡಿರುವ ಈ ಕಠಿಣ ನಿರ್ಧಾರದ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಸಾರಿಗೆ ಇಲಾಖೆಯ ನಿರ್ಧಾರವನ್ನು ಕೆಲವರು ಸ್ವಾಗತಿಸಿದರೆ, ಇನ್ನು ಕೆಲವರು ಈ ಕಟ್ಟುನಿಟ್ಟಿನ ನಿಯಮ ದುರ್ಬಳಕೆಯಾಗುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ.