ಬಿಬಿಎಂಪಿಯು ಜಾಗತಿಕ ರಸ್ತೆ ಸುರಕ್ಷತೆಗಾಗಿ ಬ್ಲೂಮ್‌ಬರ್ಗ್ ಫಿಲಾಂತ್ರಪಿಸ್ ಇನಿಶಿಯೇಟಿವ್ ಅಡಿಯಲ್ಲಿ ಜ್ಞಾನ ಪಾಲುದಾರರಾಗಿ ಡಬ್ಲ್ಯುಆರ್‌ಐ ಇಂಡಿಯಾದ ಸಹಭಾಗಿತ್ವದಲ್ಲಿ ಡಿಸೆಂಬರ್ 08 ಹಾಗೂ 09, 2023ರಂದು 2 ದಿನಗಳ ಕಾಲ ಪಾಲಿಕೆ ಕೇಂದ್ರ ಕಛೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ “ನಮ್ಮ ರಸ್ತೆ”(ನಮ್ಮ ಬೀದಿಗಳು) ಪ್ರದರ್ಶನ ಹಾಗೂ ಕಾರ್ಯಗಾರಕ್ಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ ಮುಖ್ಯ ಆಯುಕ್ತರು ಮಾತನಾಡಿ, ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಗಾರವು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಗಾರದಲ್ಲಿ ಬಂದAತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.
ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಗಾರದ ಕುರಿತು ವಿವರ:
ಬೆಂಗಳೂರಿನ ರಸ್ತೆಗಳನ್ನು ನಾಗರಿಕ ಬಳಕೆದಾರರಿಗೆ ಸುರಕ್ಷಿತವಾಗಿರಿಸಲು, ಎಲ್ಲಾ ತರಹದ ಬಳಕೆದಾರರಿಗೆ ಉಪಯೋಗಿಸುವಂತಾಗಲು, ಸ್ಥಿತಿಸ್ಥಾಪಕವಾಗಿಸಲು ಬೇಕಾದ ಎಲ್ಲಾ ಪರಿಹಾರಗಳನ್ನು ಆಲೋಚಿಸಲು ಹಾಗೂ ಸಲಹೆಗಳನ್ನು ಪಡೆಯಲು ಸೇರಿದಂತೆ ಇನ್ನಿತರೆ ಚರ್ಚೆಗಳು ಸಮಾವೇಶದಲ್ಲಿ ನಡೆಯಲಿದೆ.
“ನಮ್ಮ ರಸ್ತೆ” ಎಂಬ ವಿಶಿಷ್ಟ ಅಭಿಯಾನವು ಬ್ರಾಂಡ್ ಬೆಂಗಳೂರು ನಿರ್ಮಾಣ ಮಾಡಲು ಸಾಕಷ್ಟು ಸಹಕಾರಿಯಾಗಲಿದೆ. ಇದರಿಂದ ಬೆಂಗಳೂರಿನಲ್ಲಿ ಸಕ್ರಿಯ ಸಾರಿಗೆಯನ್ನು ಉತ್ತೇಜಿಸಲು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸಲು, ಪಾದಚಾರಿ-ಸ್ನೇಹಿ ಬೀದಿಗಳು, ಸೈಕ್ಲಿಂಗ್ ಗಾಗಿಯೇ ಮೀಸಲಾದ ಪ್ರತ್ಯೇಖ ಲೇನ್‌ಗಳು ಮತ್ತು ಹಸಿರುಮಯವಾದ ಸ್ಥಳಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ.
ಇದನ್ನೂ ಓದಿ: ರಾಣೆಬೆನ್ನೂರು ತಾಲೂಕು ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ಗರ್ಭಿಣಿಯರ ಪರದಾಟ!
ನಗರದಲ್ಲಿ ಸುರಕ್ಷಿತ ರಸ್ತೆಗಳನ್ನು ಸಿದ್ಧಪಡಿಸುವ ಸಲುವಾಗಿ ಕಾರ್ಯಗಾರದಲ್ಲಿ ಅನುಭವಗಳನ್ನು ಹಂಚಿಕೊಳ್ಳಲು ನಾಗರಿಕರು, ನಾಗರಿಕ ಸಂಸ್ಥೆಗಳು, ವಿನ್ಯಾಸಕರು, ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಎಲ್ಲರಿಗೂ ಮುಕ್ತ ಪ್ರವೇಶವಿರಲಿದ್ದು, ಸಮಾವೇಶದಲ್ಲಿ ಎರಡು ದಿನಗಳ ಕಾಲ ಪಾಲಿಕೆಯ ಎಂಜಿನಿಯರ್‌ಗಳೊಂದಿಗೆ ತರಬೇತಿ ಕಾರ್ಯಗಾರ ಕೂಡಾ ನಡೆಯಲಿದೆ.
ನಗರದಲ್ಲಿ ಮೆಟ್ರೋ ಜಾಲ, ಉಪನಗರ ರೈಲು ಸೌಲಭ್ಯಗಳು ಮತ್ತು ಬಸ್‌ಗಳ ಸೇವೆಗಳ ತ್ವರಿತ ವಿಸ್ತರಣೆಯೊಂದಿಗೆ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ. ಈ ಎಲ್ಲಾ ಪ್ರಯತ್ನಗಳ ಯಶಸ್ಸು ಸಂಪೂರ್ಣ ಸಂಪರ್ಕಿತ ಸಾರಿಗೆ ವ್ಯವಸ್ಥೆಗಳು ಮತ್ತು ಪಾದಚಾರಿ ಮೂಲಸೌಕರ್ಯಗಳ ಯೋಜನೆ, ವಿನ್ಯಾಸ ಮತ್ತು ಕಾರ್ಯಾಚರಣೆಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಸುಯೋಜಿತ ವ್ಯವಸ್ಥೆ ಜನರನ್ನು ಒಂದು ಸಾರಿಗೆ ವಿಧಾನದಿಂದ ಇನ್ನೊಂದು ಸಾರಿಗೆ ವಿಧಾನಕ್ಕೆ ಸರಳವಾಗಿ ಮತ್ತು ಸುರಕ್ಷಿತವಾಗಿ ಬದಲಾಯಿಸಲು ಅನುಕೂಲ ಮಾಡಿಕೊಡುತ್ತದೆ. ಈ ನಿಟ್ಟಿನಲ್ಲಿ ಸಮಾವೇಶದಲ್ಲಿ ಚರ್ಚಿಸಿ ಬಂದಂತಹ ಉತ್ತಮ ಸಲಹೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ.
ಪ್ರಸಕ್ತ ಸಾಲಿನಲ್ಲಿ ಪಾಲಿಕೆಯು ಸುರಕ್ಷಾ 75 ಮಿಷನ್ 2023ರಡಿ ನಗರದ 75 ನಿರ್ಣಾಯಕ ಜಂಕ್ಷನ್ ಗಳಲ್ಲಿ ಮರು ವಿನ್ಯಾಸಗಳನ್ನು ಮಾಡುತ್ತಿದ್ದು, ಅಭಿವೃದ್ಧಿಯ ಕಾರ್ಯ ಪ್ರಗತಿಯಲ್ಲಿದೆ. ಇದು ಜನರ ಕೇಂದ್ರಿತ ಜಂಕ್ಷನ್ ವಿನ್ಯಾಸಗಳನ್ನು ರಚಿಸುವ ಗುರಿಯನ್ನು ಹೊಂದಿದ್ದು, ಇದರಿಂದ ಸುರಕ್ಷಿತ, ಪರಿಣಾಮಕಾರಿ ಮತ್ತು ಸುಲಲಿತವಾಗಿ ಪ್ರವೇಶಿಸುವಂತೆ ಮಾಡುತ್ತದೆ.
ದೊಡ್ಡ ಸಮಸ್ಯೆಗಳಿಗೆ ಸರಳ ವಿನ್ಯಾಸ ಪರಿಣಾಮಗಳು:
• ರಸ್ತೆಗಳ ಮಧ್ಯೆಯಿರುವ ಸ್ಥಳವನ್ನು ಆಶ್ರಯ ದ್ವೀಪವಾಗಿ ನಿರ್ಮಾಣ ಮಾಡುವುದು.
• ಸ್ಪೀಡ್ ಹಂಪ್ ಗಳ ನಿರ್ಮಾಣ ಮಾಡುವುದು.
• ರಸ್ತೆ ಮಾರ್ಕಿಂಗ್ ಮಾಡುವುದು.
• ರಸ್ತೆಯ ಮೀಡಿಯನ್ ಭಾಗದಲ್ಲಿ ಪಾದಚಾರಿಗಳು ನಿಲ್ಲಲು ವ್ಯವಸ್ಥೆ ಮಾಡುವುದು.
• ಪಾದಚಾರಿಗಳಲ್ಲಿ ಕರ್ಬ್ ವಿಸ್ತರಿಸುವುದು.
• ನಾಗರಿಕರ ಅನುಕೂಲಕ್ಕಾಗಿ ಸೈನೇಜ್ ಗಳ ಅಳವಡಿಕೆ.
• ಎತ್ತರದ ಪಾದಚಾರಿ ಕ್ರಾಸಿಂಗ್ ನಿರ್ಮಾಣ ಮಾಡುವುದು.
• ಮಲ್ಟಿ ಯುಟಿಲಿಟಿ ಸೈಡ್ ವಾಕ್ ಜೋನ್ ನಿರ್ಮಾಣ ಮಾಡುವುದು.
• ರಸ್ತೆ ಬದಿಯ ಕಟ್ಟಡ ಪ್ರವೇಶದ ಬಳಿ ಸುರಕ್ಷಿತ ವಿನ್ಯಾಸ ನಿರ್ಮಿಸುವುದು.
• ಕಾಂಪ್ಯಾಕ್ಟ್ ಇಂಟರ್ ಸೆಕ್ಷನ್ ಗಳ ನಿರ್ಮಾಣ.
• ವಾಹನಗಳ ವೇಗ ನಿಯಂತ್ರಿಸಲು ರಂಬಲ್ ಸ್ಟ್ರಿಪ್ಸ್ ಅಳವಡಿಕೆ.
• ಬಸ್ ತಂಗುದಾಣಗಳ ನಿರ್ಮಾಣ.
ಈ ವೇಳೆ ಗ್ಲೋಬಲ್ ಅರ್ಬನ್ ಮೊಬಿಲಿಟಿಯ ಉಪ ನಿರ್ದೇಶಕರು ಮತ್ತು ಆರೋಗ್ಯ ಮತ್ತು ರಸ್ತೆ ಸುರಕ್ಷತೆಯ ನಿರ್ದೇಶಕರು, ಸುಸ್ಥಿರ ನಗರಗಳಿಗಾಗಿ WRI ರಾಸ್ ಸೆಂಟರ್ ನ ಕ್ಲೌಡಿಯಾ ಆಡ್ರಿಯಾಜೋಲಾ-ಸ್ಟೀಲ್, ಜಾಗತಿಕ ರಸ್ತೆ ಸುರಕ್ಷತೆಗಾಗಿ ಬ್ಲೂಮ್‌ಬರ್ಗ್ ಫಿಲಾಂತ್ರಪೀಸ್ ಇನಿಶಿಯೇಟಿವ್ ನ ವೈಟಲ್ ಸ್ಟ್ರಾಟಜೀಸ್(ರಸ್ತೆ ಸುರಕ್ಷತೆ)ನಲ್ಲಿ ಹಿರಿಯ ವ್ಯವಸ್ಥಾಪಕರಾದ ಲೀವಾಂಟಾ ಮಿಲ್ಲರ್, ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.