ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಯೇ ಕಾರಣ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡವು ಇಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತು. ಅಲ್ಲದೇ ಗೋಪೂಜೆಯನ್ನೂ ನೆರವೇರಿಸಿ ದನದ ಮಾಲೀಕನಿಗೆ ಧೈರ್ಯ ತುಂಬಿತು.
ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ ಎಂದು ವಿಜಯೇಂದ್ರ ಅವರು ಖಂಡಿಸಿದರು. ಈ ದುರ್ಘಟನೆ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಇವರ ಪಾಪದ ಕೊಡ ತುಂಬಿದೆ. ಆದ್ದರಿಂದ ಇಂಥ ದುರ್ಘಟನೆ ಆಗುತ್ತಿದೆ ಎಂದು ಅವರು ತಿಳಿಸಿದರು.
ಯಾರೋ ಬಡಪಾಯಿಯನ್ನು ತಂದು ಅವನೇ ಮಾಡಿದ್ದಾಗಿ ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಚರ್ಚೆ ನಡೆದಿದೆ. ಬಡ ಕುಟುಂಬದಿಂದ ಬಂದ ಹಸುವಿನ ಮಾಲೀಕರು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಭೇಟಿ ಮಾಡಿ, ಗೋಪೂಜೆ ಮಾಡಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಭೀಕರ ಅಪಘಾತ.. ಆಸ್ಪತ್ರೆಗೆ ದಾಖಲು!
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ಹಿಂದೂಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ಹಿಂದೂ- ಮುಸ್ಲಿಂ ಸಮುದಾಯಕ್ಕೆ ಬೇರೆ ಬೇರೆ ನೀತಿ ಅನುಸರಿಸಿ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಗೂಂಡಾಗಿರಿ ಸರಕಾರ; ತಾಲಿಬಾನ್ ಸರಕಾರ ಇಲ್ಲಿದೆ. ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಬರುತ್ತಿದ್ದರು ಎಂದು ತಿಳಿಸಿದರು.
ಆರೋಪಿ ಮತಿಭ್ರಮಣೆಗೆ ಒಳಗಾದವ ಎಂದು ಕಾಂಗ್ರೆಸ್ಸಿಗರು ಕಥೆ ಹೆಣೆದಿದ್ದಾರೆ. ಆತ 10 ವರ್ಷಗಳಿಂದ ಅವರ ಅಣ್ಣನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ಇದೆ. ಆತ ಮದ್ಯಪಾನ ಮಾಡಿದ್ದರೆ ಅಷ್ಟು ಹೊತ್ತು ಬಾರ್ ತೆರೆದಿರಲು ಹೇಗೆ ಸಾಧ್ಯ? ಮುಂಜಾನೆ 3 ಅಥವಾ 4ರ ಹೊತ್ತಿಗೆ ಇಂಥ ದುಷ್ಕøತ್ಯ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಸುಮಾರು 500 ಕೋಟಿಗೂ ಹೆಚ್ಚು ಮೌಲ್ಯದ ಜಾಗದ ದನದ ಆಸ್ಪತ್ರೆ ಇಲ್ಲಿದೆ. ಈ ಜಾಗವನ್ನು ಸರಕಾರವು ವಕ್ಫ್ ಬೋರ್ಡಿಗೆ ನೀಡಿದೆ. ಅದರ ವಿರುದ್ಧ ಹೋರಾಟ ಮಾಡಿದವರಲ್ಲಿ ಮುಂಚೂಣಿಯಲ್ಲಿ ಕರ್ಣ ಇದ್ದು, ಕರ್ಣನ ಹಸುಗಳ ಕೆಚ್ಚಲು ಕತ್ತರಿಸುವ ಮೂಲಕ ಕರ್ಣನಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸಚಿವರಿಗೆ ಟೈಮ್ ಬಾಂಡ್: ಫಲಿತಾಂಶ ತೋರದಿದ್ದರೆ ಸಂಪುಟದಿಂದ ಔಟ್!
ಒಬ್ಬರೇ ಮಾಡಿದ ಕೃತ್ಯ ಇದಲ್ಲ; ಇದರ ಹಿಂದಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು. ಇದೊಂದು ಧರ್ಮಯುದ್ಧ; ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಅವರು ಪ್ರಕಟಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್ ರಾವ್, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಈ ತಂಡದಲ್ಲಿದ್ದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.