ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿರುವ ನಿರಾಣಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮದಿಂದ 6 ಕಾರ್ಮಿಕರು ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಭಾನುವಾರ ಮಧ್ಯಾಹ್ನದ ವೇಳೆ ಡಿಸ್ಟಿಲರಿ ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡಿದೆ.ಈ ಸ್ಪೋಟಕ್ಕೆ ಕಟ್ಟಡದ ಮೇಲ್ಚಾವಣಿ ಕುಸಿಡಿದೆ.ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವು ಕಾರ್ಮಿಕರು ಸಿಕ್ಕಿದ್ದಾರೆ ಎನ್ನುವ ಶಂಕೆ ವ್ಯಕ್ತಪಡಿಸಲಾಗಿದೆ
Karnataka: 6 people died and 5 critically injured in a boiler blast in Nirani sugars at Mudhol, Bagalkot district earlier today. More details awaited. pic.twitter.com/xcnaYIv88b
— ANI (@ANI) December 16, 2018
ಮೂಲಗಳ ಪ್ರಕಾರ ಈ ಕಾರ್ಖಾನೆಯ ಡಿಸ್ಟಿಲರಿ ಘಟಕದಲ್ಲಿ ಸುಮಾರು 20 ಕ್ಕಿಂತಲೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಸದ್ಯ ಘಟನೆಯಲ್ಲಿ ಸಾವನ್ನಪ್ಪಿದವರ ವಿವರಗಳು ಇನ್ನು ತಿಳಿದುಬಂದಿಲ್ಲ. ಸಾವಿನ ಮತ್ತು ಗಾಯಗೊಂಡವರ ಸಂಖ್ಯೆ ಇನ್ನು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.
Visuals from Nirani sugars in Mudhol, Bagalkot where 6 people died and 5 were critically injured in a boiler blast earlier today. pic.twitter.com/PlzlwjCvkd
— ANI (@ANI) December 16, 2018
ಈಗಾಗಲೇ ಘಟನೆ ನಡೆದ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂಧಿ ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ.ದುರ್ಘಟನೆಯಲ್ಲಿ ಗಾಯಗೊಂಡವರನ್ನು ಬಾಗಲಕೋಟೆ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ.