ಬೆಂಗಳೂರು: ಕರ್ನಾಟಕ ಸರ್ಕಾರವು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತರದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ-2025 ಸುಗ್ರೀವಾಜ್ಞೆಯನ್ನು ಜಾರಿಗೊಳ್ಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಅನುಷ್ಠಾನದಲ್ಲಿರುವ ಸುಗ್ರೀವಾಜ್ಞೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೆಚ್ಚು ಅಧಿಕಾರಗಳನ್ನು ನೀಡಿದ್ದು, ಸಾಲಗಾರರಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ಮುನ್ನೆಚ್ಚರಿಗೆ ವಹಿಸಬೇಕು. ಮತ್ತು ನಿಯಮಾನುಸಾರ ಸಾಲಕೊಡುವವರಿಗೂ ತೊಂದರೆಯಾಗದಂತೆ ಗಮನಹರಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಹೇಳಿದರು.
ಅವರು ಇಂದು ಸಂಜೆ ವಿಡಿಯೋ ಸಂವಾದದ ಮೂಲಕ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮಹಾನಗರ ಪೊಲೀಸ್ ಆಯುಕ್ತರೊಂದಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಅನುಷ್ಠಾನ ಕುರಿತು ಸಭೆ ಜರುಗಿಸಿ ಮಾತನಾಡಿದರು.
ಈ ಸುಗ್ರೀವಾಜ್ಞೆಯಿಂದ ನಿಯಮಾನುಸಾರ ಸಾಲ ನೀಡುವ ಲೇವಾದೇವಿಗಾರರಿಗೆ ಹಾಗೂ ಮನಿಲ್ಯಾಂಡರ್ ಅವರಿಗೆ ತೊಂದರೆ, ಕಿರುಕುಳ ಆಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಬಡವರು, ಮಹಿಳೆಯರು ಮತ್ತು ರೈತರಿಗೆ ಸಾಲ ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್‍ದವರಿಂದ ಯಾವುದೇ ಕಿರುಕುಳ, ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೆಳಿಗ್ಗೆ 9 ಗಂಟೆಗೆ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಸಾಲಗಾರರ ಮನೆಗೆ ಸಾಲ ವಸೂಲಾತಿಗಾಗಿ ಹೊಗಬಾರದು. ಬಲವಂತದ ವಸೂಲಾತಿಯನ್ನು ತಡೆಯಲು ಈ ಕಾನೂನು ಜಾರಿ ಮಾಡಲಾಗಿದೆ. ರಾಜ್ಯದಲ್ಲಿ 2022 ರಿಂದ 2025ರವರೆಗೆ ಇಂತಹ ಪ್ರಕರಣಗಳನ್ನು ಗಮನಸಿದಾಗ ಕಳೇದ 2 ತಿಂಗಳಲ್ಲಿ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಮೈಕ್ರೋ ಫೈನಾನ್ಸ್‍ಗಳಿಂದ ಸಾಲ ಪಡೆದವರಿಗೆ ಆಗುವ ಕಿರುಕುಳವನ್ನು ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸುಗ್ರೀವಾಜ್ಞೆಯನ್ನು ಅಧಿಕಾರಿಗಳು ಸರಿಯಾಗಿ ಅಧ್ಯಯನ ಮಾಡಿ, ಜಾರಿ ಮಾಡಬೇಕು. ಡಿಸಿ, ಎಸ್‍ಪಿಗಳು ಪ್ರೊ ಆ್ಯಕ್ವೀವ್ ಆಗಿ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾಲ ವಸೂಲಾತಿಗಾಗಿ ಅನಗತ್ಯ ಕಿರುಕುಳ, ತೊಂದರೆ ಆಗುವಂತಹ ಪ್ರಕರಣಗಳನ್ನು ನಿಯಂತ್ರಿಸಿ, ಪ್ರಕರಣಗಳು (ಜೀರೊ) ಶೂನ್ಯ ಆಗುವಂತೆ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳು ನಿರ್ದೇಶಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಮಾನ್ಯ ಶಾಲಿನಿ ರಜನೀಶ ಅವರು ವಿಡಿಯೋ ಸಂವಾದ ನಿರ್ವಹಿಸಿ, ಡಿಸಿ, ಎಸ್‍ಪಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ನೀಡಿದ ಸಲಹೆ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.