ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕಾರಣವಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

Written by - Krishna N K | Last Updated : Feb 11, 2025, 05:28 PM IST
    • ನಮ್ಮ ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ
    • ಬೆಂಗಳೂರು ಜನತೆ ಮುಂದೆ ಸಿಎಂ ಸಿದ್ದರಾಮಯ್ಯ ವಾಸ್ತವಾಂಶ
    • ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಮುಖ್ಯಮಂತ್ರಿ
ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕಾರಣವಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ title=

ಬೆಂಗಳೂರು : ನಮ್ಮ ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಟ್ಟಿದ್ದಾರೆ.. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. 

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಚರ್ಚೆ

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. 

ಇದನ್ನೂ ಓದಿ:ದಾಂಧಲೆ ಎಬ್ಬಿಸಿದವರ ಬಂಧಿಸಿ, ಕ್ರಮಕ್ಕೆ ಸೂಚನೆ : ಗೃಹ ಸಚಿವ ಜಿ. ಪರಮೇಶ್ವರ್‌

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? 

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಇದನ್ನೂ ಓದಿ:ಕಾಂಗ್ರೆಸ್‌ ಸರ್ಕಾರ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ  ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು  (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಇದನ್ನೂ ಓದಿ:ಬಿಜೆಪಿ ತಮಗೆ ಬೇಕಾದ ಕಡೆ EVM ಮೂಲಕ ಗೆಲ್ಲುತ್ತದೆ: ಶಿವರಾಜ ತಂಗಡಗಿ

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News