ಹುಷಾರು… ಕರ್ನಾಟಕ ಉತ್ತರ ಭಾರತದಂತಾಗುವ ಸಾಧ್ಯತೆ; ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಚಳಿ!

Karnataka Weather: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಆಗಾಗ ಚಳಿ-ಶೀತಗಾಳಿ ಜಾಸ್ತಿಯಾಗುವ ಸುದ್ದಿ ಕೇಳಿರುತ್ತೀರಿ. ಆದರೀಗ ಅಂಥ ಪರಿಸ್ಥಿತಿ ಕರ್ನಾಟಕಕ್ಕೂ ಬರುತ್ತಿದೆ.

Written by - Yashaswini V | Last Updated : Jan 3, 2025, 05:24 PM IST
  • ಮುಂಜಾನೆ ಮತ್ತು ಸಾಯಂಕಾಲ ಮಂಜು ಕೂಡಿದ ವಾತಾವರಣ ನಿರ್ಮಾಣವಾಗುವುದರಿಂದ ಹವಾಮಾನ ತಣ್ಣಾಗಾಗುತ್ತದೆ.
  • ಗಾಳಿ, ಶೀತಗಾಳಿಯಾಗಿ ಪರಿವರ್ತಿತವಾಗುತ್ತದೆ ಮತ್ತು ಚಳಿಯ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗುತ್ತದೆ.
  • ಹವಾಮಾನ ಇಲಾಖೆ ಪ್ರಕಾರ ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್​​ ಕಡಿಮೆ ಆಗಬಹುದು.
ಹುಷಾರು… ಕರ್ನಾಟಕ ಉತ್ತರ ಭಾರತದಂತಾಗುವ ಸಾಧ್ಯತೆ; ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಚಳಿ! title=

Weather Update: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಆಗಾಗ ಚಳಿ-ಶೀತಗಾಳಿ ಜಾಸ್ತಿಯಾಗುವ ಸುದ್ದಿ ಕೇಳಿರುತ್ತೀರಿ. ಆದರೀಗ ಅಂಥ ಪರಿಸ್ಥಿತಿ ಕರ್ನಾಟಕಕ್ಕೂ ಬರುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಸಿಕ್ಕಾಪಟ್ಟೆ ಚಳಿ ಹೆಚ್ಚಾಗಲಿದೆ ಎನ್ನುವ ಮಾಹಿತಿಗಳು ಕೇಳಿಬರುತ್ತಿವೆ. 

ಹವಾಮಾನ ವೈಪರೀತ್ಯ ಎಲ್ಲಿ? ಯಾವ ರೀತಿ ಆಗುತ್ತದೆ ಎನ್ನುವುದನ್ನು ಅಂದಾಜು ಮಾಡುವುದೇ ಕಷ್ಟವಾಗುತ್ತಿದೆ. ಕರ್ನಾಟಕ ಹಿಂದೆಂದೂ ಯದ್ವಾತದ್ವಾ ಚಳಿ ಮತ್ತು ಶೀತಗಾಳಿಯನ್ನು ಎದುರಿಸುತ್ತಿರಲಿಲ್ಲ. ಆದರೀಗ ಹವಮಾನ ಇಲಾಖೆಯ ಮಾಹಿತಿಗಳ ಪ್ರಕಾರ ಮುಂದಿನ ದಿನಗಳಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆ ಮಂಜು ಬೀಳುವ ಪ್ರಮಾಣ ಜಾಸ್ತಿಯಾಗುತ್ತದೆ.

ಇದನ್ನೂ ಓದಿ- ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು: ಪ್ರಾಂಶುಪಾಲ ಸೇರಿ ಇಬ್ಬರು ಅಮಾನತು

ಮುಂಜಾನೆ ಮತ್ತು ಸಾಯಂಕಾಲ ಮಂಜು ಕೂಡಿದ ವಾತಾವರಣ ನಿರ್ಮಾಣವಾಗುವುದರಿಂದ ಹವಾಮಾನ ತಣ್ಣಾಗಾಗುತ್ತದೆ. ಗಾಳಿ, ಶೀತಗಾಳಿಯಾಗಿ ಪರಿವರ್ತಿತವಾಗುತ್ತದೆ ಮತ್ತು ಚಳಿಯ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗುತ್ತದೆ ಎಂದು ತಿಳಿದುಬಂದಿದೆ. 

ಹವಮಾನ ಇಲಾಖೆ ಪ್ರಕಾರ ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್​​ ಕಡಿಮೆ ಆಗಬಹುದು. ಎಲ್ಲೆಲ್ಲಿ ಎಷ್ಟು ಪ್ರಮಾಣದ ತಾಪಮಾನ ಇರುತ್ತದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ… 

ಇದನ್ನೂ ಓದಿ- ಸರ್ಕಾರಿ ಬಸ್ ಪ್ರಯಾಣ ದರ ಇನ್ಮುಂದೆ ಕಾಸ್ಟ್ಲಿ: ಶೇ 15ರಷ್ಟು ದರ ಹೆಚ್ಚಳ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್
ಮೈಸೂರಿನಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್​ 
ಮಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್​ 
ಶಿವಮೊಗ್ಗದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್​ 
ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್​ 
ಕೋಲಾರದಲ್ಲಿ ಗರಿಷ್ಠ 24 ಮತ್ತು ಕನಿಷ್ಠ 13  ಡಿಗ್ರಿ ಸೆಲ್ಸಿಯಸ್​ 
ತುಮಕೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 13 ಡಿಗ್ರಿ ಸೆಲ್ಸಿಯಸ್
ಉಡುಪಿಯಲ್ಲಿ ಗರಿಷ್ಠ 31 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್​ 
ಉತ್ತರ ಕನ್ನಡದಲ್ಲಿ ಗರಿಷ್ಠ 33 ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್​ 
ಚಿಕ್ಕಮಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 12 ಡಿಗ್ರಿ ಸೆಲ್ಸಿಯಸ್​ 
ಹುಬ್ಬಳ್ಳಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್
ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ಚಳಿಯ ವಾತಾವರಣವಿರುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News