ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧಾರ- ಡಿಸಿಎಂ ಡಿ.ಕೆ.ಶಿವಕುಮಾರ್

ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.  

Written by - Manjunath N | Last Updated : Jan 8, 2025, 11:46 PM IST
  • ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಜನವರಿ 21ರಂದು ನಡೆಸಲು ನಿರ್ಧರಿಸಲಾಗಿದೆ. ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇವೆ. ಈ ಸಮಾವೇಶದ ಮೂಲಕ "ಗಾಂಧಿ ಭಾರತ" ಕಾರ್ಯಕ್ರಮವನ್ನು ಮುಂದುವರೆಸುವಂತಹ ಕೆಲಸವನ್ನು ನಾವು ಮಾಡುತ್ತಿದ್ದೇವೆ.
 ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧಾರ- ಡಿಸಿಎಂ ಡಿ.ಕೆ.ಶಿವಕುಮಾರ್ title=

ಬೆಂಗಳೂರು: ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಅವರು ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದರು.

ಮಾಜಿ ಪ್ರಧಾನಿ ಶ್ರೀ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಜನವರಿ 21ರಂದು ನಡೆಸಲು ನಿರ್ಧರಿಸಲಾಗಿದೆ.ಎಐಸಿಸಿ ವತಿಯಿಂದ ನಡೆಯಲಿರುವ ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇವೆ.ಈ ಸಮಾವೇಶದ ಮೂಲಕ "ಗಾಂಧಿ ಭಾರತ" ಕಾರ್ಯಕ್ರಮವನ್ನು ಮುಂದುವರೆಸುವಂತಹ ಕೆಲಸವನ್ನು ನಾವು ಮಾಡುತ್ತಿದ್ದೇವೆ.ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರು ಬರುವ ಬಗ್ಗೆ ನಾವು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಅವರು ಹೇಳಿದರು. 

ಇದನ್ನೂ ಓದಿ- ISROದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ!ತಿಂಗಳಿಗೆ 2,08,700 ರೂ.ವರೆಗೆ ವೇತನ! ಅರ್ಜಿ ಸಲ್ಲಿಸಬೇಕಾದ ಹುದ್ದೆಯ ವಿವರ ಹೀಗಿದೆ

ಜನವರಿ 13 ರಂದು ಈ ಕುರಿತು ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕೆಪಿಸಿಸಿ ಸದಸ್ಯರು, ಶಾಸಕರು, ಸಚಿವರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಎಲ್ಲರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಇದರ ಜೊತೆಗೆ ಪದಾಧಿಕಾರಿಗಳ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಲಿದೆ.ಇದಲ್ಲದೆ ಜನವರಿ 15 ಹಾಗೂ 16 ರಂದು ಸಚಿವರು,ಶಾಸಕರು,ಮುಖಂಡರು,ಮಾಜಿ ಶಾಸಕರು,ಮಾಜಿ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ವಭಾವಿ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ- ಇಸ್ರೋ ಯೋಜನೆಗೆ ಪೇಲೋಡ್ ಒದಗಿಸಿದ ಆದಿಚುಂಚನಗಿರಿ ಇಂಜಿನಿಯರಿಂಗ್ ಕಾಲೇಜುಗಳು

ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮದಡಿ ನಡೆಯುವ ಸಮಾವೇಶದಲ್ಲಿ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಚಾರಿತ್ರಿಕ ಹಿನ್ನೆಲೆಯುಳ್ಳ ಪುಸ್ತಕವನ್ನು ಕೆಪಿಸಿಸಿ ವತಿಯಿಂದ ಬಿಡುಗಡೆ ಮಾಡಲಾಗುತ್ತದೆ.ಈ ಸಮಾವೇಶಕ್ಕೆ ಪಕ್ಷದ ಎಲ್ಲರೂ ಭಾಗಿಯಾಗಲಿದ್ದು, ಗಾಂಧೀಜಿ ಅವರ ತತ್ವಗಳನ್ನು ಉಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

 

Trending News