ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬಿಜೆಪಿಯವರು ತಮ್ಮ ಆಂತರಿಕ ಸಮಸ್ಯೆ  ಉಚ್ಚಿ ಹಾಕಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. 

Written by - Ranjitha R K | Last Updated : Aug 21, 2024, 01:16 PM IST
  • ಬಿಜೆಪಿ ಪ್ರತಿಭಟನೆ ಬಗ್ಗೆ ಡಿಕೆಶಿ ವ್ಯಂಗ್ಯ
  • ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ
 ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ title=

ಬೆಂಗಳೂರು : ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ.ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ.ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

"ಮೂಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು.ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ.ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?" ಎಂದು ಕುಟುಕಿದರು.

ಇದನ್ನೂ ಓದಿ : ಮಳೆಗೆ ಕಂಗಾಲಾದ ನಗರ ನಿವಾಸಿಗಳು, ಜನಜೀವನ ಅಸ್ತವ್ಯಸ್ತ

ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ :
"ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ.ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ" ಎಂದರು.

"ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ.ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ.ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು.ಆಗ ನಾವೇನು ಮಾತನಾಡಲಿಲ್ಲ.ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ ಎಂದು ಹೇಳಿದರು.

ಇದನ್ನೂ ಓದಿ : ಬೆನ್ನುನೋವು ಮತ್ತು ದೌರ್ಬಲ್ಯದಿಂದ ಬಳಲುತ್ತಿದ್ದ ಭೀಮಪ್ಪ

"ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ" ಎಂದು ತಿಳಿಸಿದರು.

"ಆಲಮಟ್ಟಿ ತುಂಬಿ ತುಳುಕುತ್ತಿದೆ.ಮಂಡ್ಯ ಸೇರಿದಂತೆ  ಇತರ ಗ್ರಾಮಾಂತರ ಭಾಗಗಳಲ್ಲಿ  ಇನ್ನೂ ಕೆರೆಗಳು ತುಂಬಿಲ್ಲ.ಉತ್ತಮ ಮಳೆಯಾಗಿ ಆ ಕೆರೆಗಳು ಕೂಡಾ ತುಂಬವ ನಿರೀಕ್ಷೆ ಇದೆ" ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News