ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ : ಡಿಸಿಎಂ ಡಿ.ಕೆ. ಶಿವಕುಮಾರ್

ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Krishna N K | Last Updated : Jan 10, 2025, 12:41 PM IST
    • ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ.
    • ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು.
    • ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ.
ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ : ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು : ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌  ಹೇಳಿದರು.

ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗುರುವಾರ ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಕೇಳಿದಾಗ, ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ವೈಕುಂಠ ಏಕಾದಶಿಯ ಈ ಪವಿತ್ರ ದಿನದಂದು ನಿಮ್ಮ ಪ್ರೀತಿ ಪಾತ್ರರಿಗೆ ಶುಭ ಕೋರಲು ಇಲ್ಲಿವೆ ವಿಶೇಷ ಸಂದೇಶಗಳು

ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.

ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ:ಇನ್ನು ಮುಂದೆ ಸರ್ಕಾರಿ ನೌಕರರ ವೇತನ ಹೆಚ್ಚಾಗುವುದು ಈ ಆಧಾರದಲ್ಲಿ! ಹಾಗಾದರೆ ವೇತನ ಆಯೋಗವನ್ನು ಕೈ ಬಿಡಲಿದೆಯಾ ಸರ್ಕಾರ ? 

ವೆಂಕಟೇಶ್ವರನ ಜೊತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News