ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

Written by - Chetana Devarmani | Last Updated : Jan 7, 2025, 04:21 PM IST
  • ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ
  • ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ
  • ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ
ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್ title=

ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಡಿಸಿಎಂ ಅನುಪಸ್ಥಿತಿಯಲ್ಲಿ  ಅನೇಕ ಡಿನ್ನರ್ ಸಭೆಗಳು ನಡೆಯುತ್ತಿವೆ ಎಂದು ಕೇಳಿದಾಗ, “ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ ಊಟಕ್ಕೆ ಸೇರಿದಾಗ ಹಲವಾರು ಚರ್ಚೆ ಮಾಡುವುದು ಸರ್ವೇ ಸಾಮಾನ್ಯ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೆಲವು ಸಚಿವರು, ನಾಯಕರು ಔತಣಕೂಟಕ್ಕೆ ಸೇರಿದ್ದರು. ಅದರಲ್ಲಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕಾರಣದಲ್ಲಿ ಮಾಧ್ಯಮಗಳು ಹೇಳುವ ರೀತಿ ವಿಶೇಷ ಬದಲಾವಣೆಗೆ ಒತ್ತಡ ಹಾಕಲಾಗುತ್ತಿದೆ ಎಂದು ಅರ್ಥ ಕಲ್ಪಿಸಲು ಸಾಧ್ಯವಿಲ್ಲ. ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಅವರೇ ಔತಣಕೂಟದಲ್ಲಿ ಸೇರಿರುವಾಗ ಇದರಲ್ಲಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವೇನಿದೆ?” ಎಂದು ತಿಳಿಸಿದರು.

ಪರಮೇಶ್ವರ್ ಅವರು ಪರಿಶಿಷ್ಟ ಜಾತಿ ಹಾಗೂ ಸಮುದಾಯದ ಸಚಿವರು ಹಾಗೂ ಶಾಸಕರ ಸಭೆ ಕರೆದಿದ್ದಾರೆ ಎಂದು ಕೇಳಿದಾಗ, “ಸಭೆ ಕರೆಯಬಾರದು ಅಂತೇನಿಲ್ಲವಲ್ಲ? ಅವರೂ ಸಭೆ ಕರೆಯಬಹುದು, ನೀವು ಕರೆಯಬಹುದು, ನಾನೂ ಕರೆಯಬಹುದು. ಊಟಕ್ಕೆ ಕರೆಯುವುದರಲ್ಲಿ ಯಾವುದೇ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಪರಮೇಶ್ವರ್ ಅವರು ನಮ್ಮ ಹಿರಿಯ ನಾಯಕರು, ಗೃಹಮಂತ್ರಿಗಳು. ಅವರಿಗೆ ತಮ್ಮದೇ ಆದ ಒತ್ತಡಗಳಿವೆ. ಅವರ ಸಮುದಾಯದ ಶಾಸಕರು ಅವರ ಮುಂದೆ ಕೆಲವು ಬೇಡಿಕೆ ಇಟ್ಟಿರಬಹುದು. ಬಜೆಟ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬೇಡಿಕೆ ಪೂರೈಸಲು ಚರ್ಚೆ ಮಾಡಬಹುದು. ಮತ್ತೊಂದು ಕಾಂತರಾಜು ಅವರ ವರದಿ ಬಗ್ಗೆ ಚರ್ಚೆ ಆರಂಭವಾಗಿವೆ. ಈ ಬಗ್ಗೆ ಚರ್ಚೆ ನಡೆಸಲು ಸಭೆ ಸೇರುವುದು ಸಾಮಾನ್ಯ” ಎಂದು ತಿಳಿಸಿದರು.

ಇದನ್ನೂ ಓದಿ: IND vs AUS: ಭಾರತಕ್ಕೆ ಹೀನಾಯ ಸೋಲು.. 10 ವರ್ಷಗಳ ನಂತರ ಕೈ ತಪ್ಪಿದ ಪ್ರಶಸ್ತಿ!

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಎಂಬ ಶಿವಕುಮಾರ್ ಅವರ ಹೇಳಿಕೆ ನಂತರ ಈ ಬೆಳವಣಿಗೆಗಳು ನಡೆಯುತ್ತಿವೆ ಎಂದು ಕೇಳಿದಾಗ, “ಈ ಬಗ್ಗೆ ಶಿವಕುಮಾರ್ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದು, ಈ ವಿಚಾರವಾಗಿ ನಾನು ಹೇಳುವುದೇನು ಇಲ್ಲ” ಎಂದರು.

ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ

ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಕರ್ನಾಟಕದ ಅಭಿವೃದ್ಧಿ ಹಾಗೂ ಸೇವೆ ಮಾಡಲು ಕುಮಾರಸ್ವಾಮಿ ಅವರಿಗೆ ಉತ್ತಮ ಅವಕಾಶ ಸಿಕ್ಕಿದೆ. ರಾಜ್ಯದ ಅಭಿವೃದ್ಧಿಗೆ ಅವರು ತಮ್ಮ ಸಲಹೆ ನೀಡಲಿ. 2025ನೇ ವರ್ಷದಲ್ಲಾದರೂ ದೇವರು ಅವರಿಗೆ ಒಳ್ಳೆಯ ಬುದ್ಧಿ ನೀಡಲಿ. ರಾಜ್ಯದ ಜನರ ಹಿತದೃಷ್ಟಿಯಿಂದ ಅವರ ಸಲಹೆ ಇರಲಿ. 60%, 40% ಆರೋಪ ಬಿಟ್ಟು, ಅವರಿಗೆ ಕೇಂದ್ರ ಸರ್ಕಾರದಲ್ಲಿರುವ ಅಧಿಕಾರ ಬಳಸಿಕೊಂಡು, ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬಹುದು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾದ ಪಾಲಿನ ಬಗ್ಗೆ, ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಲಿ. ಶನಿವಾರ, ಭಾನುವಾರ ಬಂದು ಆರೋಪ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಚುನಾವಣೆ ಇನ್ನು ಬಹಳ ದೂರವಿದೆ. ಈಗ ಆರೋಪ ಮಾಡುವುದು ಬೇಡ. ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡಲಿ. ನಾವು ಅವರಿಂದ ಅಭಿವೃದ್ಧಿ ಚಿಂತನೆ ನಿರೀಕ್ಷಿಸುತ್ತೇನೆ” ಎಂದು ಹೇಳಿದರು.

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಎಲ್ಲರ ಜವಾಬ್ದಾರಿ

ಸಿಎಂ ಕುರ್ಚಿ ಬಗ್ಗೆ ಚರ್ಚೆಯಾಗುತ್ತಿದ್ದು, 2028ಕ್ಕೆ ಸಿಎಂ ಆಕಾಂಕ್ಷಿ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಕೇಳಿದಾಗ, “ಈ  ವಿಚಾರವಾಗಿ ನೀವು ಅವರನ್ನು ಕೇಳಬೇಕು. ಅವರು ಆಕಾಂಕ್ಷಿಯಾಗಿದ್ದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರು ನಮ್ಮ ಪಕ್ಷದ ನಾಯಕರು, ಸಮುದಾಯದ ಮುಖಂಡರು. ರಾಜಕೀಯದಲ್ಲಿರುವವರು ತಮ್ಮದೇ ಆಸೆ ಆಕಾಂಕ್ಷಿ ಇಟ್ಟುಕೊಂಡಿರುತ್ತಾರೆ. ಅವರೊಬ್ಬರೆ ಅಲ್ಲ, ಈ ಆಸೆ ಆಕಾಂಕ್ಷೆ ಇಟ್ಟುಕೊಂಡಿರುವ ಸಾಕಷ್ಟು ಜನ ಇದ್ದಾರೆ. ಅದು ತಪ್ಪು ಎಂದು ಹೇಳಲು ಆಗುವುದಿಲ್ಲ. ಅವರನ್ನು ಸಿಎಂ ಮಾಡುವ ಬಗ್ಗೆ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ನಂತರ ಸಿಎಂ ಮಾಡುವ ವಿಚಾರ ಚರ್ಚೆಯಾಗುತ್ತದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಜವಾಬ್ದಾರಿ ನಮ್ಮ 140 ಶಾಸಕರ ಮೇಲಿದೆ. ಜನ ಕಾಂಗ್ರೆಸ್ ಪಕ್ಷವನ್ನು ಜನ ಅಧಿಕಾರಕ್ಕೆ ತಂದಿದ್ದು, ಇದಕ್ಕೆ ಎಷ್ಟು ಕಷ್ಟಪಡಲಾಗಿದೆ ಎಂದು ಎಲ್ಲರೂ ಅರಿತು ಎಚ್ಚರಿಕೆ ನಡೆ ಇಡಬೇಕು” ಎಂದರು.

ಸಿದ್ದರಾಮಯ್ಯ ಅವರೂ ಕೆಪಿಸಿಸಿ ಅಧ್ಯಕ್ಷರಾಗಬಹುದು:

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಅವರ ಹೆಸರು ಕೇಳಿಬರುತ್ತಿದೆ ಎಂದು ಕೇಳಿದಾಗ, “ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು ಕೂತಿದ್ದಾರೆ. ಆ ಸ್ಥಾನಗಳು ಖಾಲಿಯಾಗುವ ಸಂದರ್ಭದಲ್ಲಿ ಪಕ್ಷ ಅದರ ಬಗ್ಗೆ ಚರ್ಚೆ ಮಾಡಲಿದೆ. ನಾನು ನೀವು ಇಲ್ಲಿ ಕೂತು ಚರ್ಚೆ ಮಾಡಿದರೆ ಅರ್ಥವಿಲ್ಲ. ಏನೇ ತೀರ್ಮಾನ ಮಾಡಬೇಕಾದರೂ ನಮ್ಮ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಬೇಕು. ಆಕಾಂಕ್ಷಿಗಳು ಇದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಶಿವಕುಮಾರ್ ಅವರೇ ಇರಬೇಕು ಎಂದೇನಿಲ್ಲ. ಅವರು ನಾಲ್ಕೈದು ವರ್ಷಗಳಿಂದ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ಆ ಹುದ್ದೆಗೆ ಸತೀಶ್ ಜಾರಕಿಹೊಳಿ, ರಾಜಣ್ಣ, ಪರಮೇಶ್ವರ್ ಅವರು ಮತ್ತೊಮ್ಮೆ ಆದರೂ ಸಂತೋಷ. ಈ ಸ್ಥಾನ ಅಲಂಕರಿಸಬೇಕು ಎಂದು ಬೇರೆ ಯಾರಿಗೆ ಆತುರವಿದೆಯೋ ಅವರೇ ಆದರೂ ಸಂತೋಷ. ಯಾರೂ ಆಗಬಾರದು ಎಂಬುದೇನಿಲ್ಲ. ಪಕ್ಷದ ದೃಷ್ಟಿಯಿಂದ ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಬೇಕಾದ ಗುರುತರ ಜವಾಬ್ದಾರಿ ಎಲ್ಲಾ ನಾಯಕರ ಮೇಲಿದೆ. ಸಿದ್ದರಾಮಯ್ಯ ಅವರು ಬೇಕಾದರೂ ಅಧ್ಯಕ್ಷರಾಗಬಹುದು, ನಾನಂತೂ ಆಕಾಂಕ್ಷಿಯಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: ಭಾರತದಲ್ಲಿ ಹೆಮ್ಮಾರಿ ಹೆಚ್‌ಎಂಪಿವಿ ಬಿರುಗಾಳಿ

ಅಧ್ಯಕ್ಷ ಸ್ಥಾನ ಬದಲಾವಣೆಗೆ ಪಕ್ಷದಲ್ಲಿ ತರಾತುರಿಯಿಲ್ಲವೇ ಎಂದು ಕೇಳಿದಾಗ, “ಯಾರೂ ತರಾತುರಿಯಲ್ಲಿಲ್ಲ. ಪಕ್ಷದ ಏಳಿಗೆ, ಒಳಿತು ಬಯಸುವವರು, ಜನರ ಸಂಕಷ್ಟ ಅರಿತಿರುವವರು, ತಮ್ಮ ಮುಂದಿರುವ ಸವಾಲು ತಿಳಿದು ಪಕ್ಷವನ್ನು ಸಂಘಟಿಸುವವರು ಈ ಸ್ಥಾನಕ್ಕೆ ಆಯ್ಕೆಯಾಗಬೇಕು ಎಂದು ಚಿಂತನ ಮಂಥನ ಸಭೆ ನಡೆದರೆ ಒಳ್ಳೆಯದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ” ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹೈಕಮಾಂಡ್ ನೀಡಿರುವ ಹುದ್ದೆ: 

ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ಬೇಡಿಕೆ ವಿಚಾರವಾಗಿ ಕೇಳಿದಾಗ, “ಅಧ್ಯಕ್ಷ ಸ್ಥಾನವನ್ನು ಪಕ್ಷ ಶಿವಕುಮಾರ್ ಅವರಿಗೆ ನೀಡಿದೆಯೇ ಹೊರತು, ಶಿವಕುಮಾರ್ ಅವರು ಕಿತ್ತುಕೊಂಡಿಲ್ಲ. ಪಕ್ಷದ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಖರ್ಗೆ ಅವರು ಶಿವಕುಮಾರ್ ಅವರಿಗೆ ಈ ಜವಾಬ್ದಾರಿ ನೀಡಿದ್ದಾರೆ. ಅವರು ಬೇಡ ಎಂದು ತೀರ್ಮಾನಿಸಿದರೆ ಈ ಸ್ಥಾನ ತ್ಯಜಿಸಲು ಶಿವಕುಮಾರ್ ಅವರು ಸಿದ್ಧರಿದ್ದಾರೆ. ಇವು ಶಾಶ್ವತವಾದ ಹುದ್ದೆಗಳಲ್ಲ. ತೀರ್ಮಾನ ಮಾಡಬೇಕಾದವರು ವರಿಷ್ಠರು. ಒಂದು ವ್ಯಕ್ತಿಗೆ ಒಂದು ಹುದ್ದೆ ಎಂದು ಹೇಳುವುದು ಎಐಸಿಸಿ ನಾಯಕರನ್ನು ಪ್ರಶ್ನೆ ಮಾಡುವಂತಾಗುತ್ತದೆ. ಇಂತಹ ವಿಚಾರವನ್ನು ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ದೃಷ್ಟಿಯಿಂದ ಯಾರು ಬೇಕಾದರೂ ತಮ್ಮ ಬೇಡಿಕೆ, ಸಲಹೆಗಳನ್ನು ಅವರ ಮುಂದೆ ಇಡಬಹುದು” ಎಂದು ತಿಳಿಸಿದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News