ನೆಚ್ಚಿನ ಎತ್ತುಗಳಿಗೆ ಲಕ್ಷಾಂತರ ಬೆಲೆಯ ಚಿನ್ನಾಭರಣ: ಅನ್ನದಾತನ ಉಳವಿ ಜಾತ್ರೆಯ ಸಂಕಲ್ಪ..!

Farmer: ಬಡತನದಲ್ಲಿ ಹುಟ್ಟಿದ ವ್ಯಕ್ತಿ ನೆಚ್ಚಿನ ಎತ್ತುಗಳಿಗೆ ಲಕ್ಷಗಟ್ಟಲೇ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣ ತೊಡಿಸಿ ಉಳವಿ ಜಾತ್ರೆಗೆ ಹೋಗಿ ಸಂಭ್ರಮಿಸುತ್ತಿದ್ದಾನೆ.

Written by - Yashaswini V | Last Updated : Feb 6, 2025, 03:00 PM IST
  • ಎತ್ತುಗಳಿಗೆ ಬಂಗಾರ, ಬೆಳ್ಳಿ ಆಭರಣಗಳಿಂದ ಅಲಂಕಾರ
  • ಎತ್ತುಗಳಿಗೆ ಲಕ್ಷಗಟ್ಟಲೇ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣ
ನೆಚ್ಚಿನ ಎತ್ತುಗಳಿಗೆ ಲಕ್ಷಾಂತರ ಬೆಲೆಯ ಚಿನ್ನಾಭರಣ: ಅನ್ನದಾತನ ಉಳವಿ ಜಾತ್ರೆಯ ಸಂಕಲ್ಪ..! title=

ಹುಬ್ಬಳ್ಳಿ: ನೆಚ್ಚಿನ ಎತ್ತುಗಳಿಗೆ ಚಿನ್ನಾಭರಣ ತೊಡಿಸುವ ಮೂಲಕ ಅನ್ನದಾತ, ತನ್ನೊಂದಿಗೆ ದುಡಿಯುವ ಎತ್ತುಗಳ ಮೇಲಿನ ಪ್ರೇಮವನ್ನು ತೋರಿಸಿದ್ದಾನೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ರೈತ ಈರಪ್ಪ ಅರಳಿಕಟ್ಟಿ ಕಥೆ ಇಲ್ಲಿದೆ... 

ಎತ್ತುಗಳಿಗೆ ಬಂಗಾರ, ಬೆಳ್ಳಿ ಆಭರಣಗಳಿಂದ ಅಲಂಕಾರ ಮಾಡುವ ಮೂಲಕ ಅನ್ನದಾತ ತನ್ನ ಒಡನಾಡಿಯ ಬಗ್ಗೆ ಬಹಳಷ್ಟು ಪ್ರೀತಿ ಹೊಂದಿದ್ದಾನೆ. ಹೌದು.. ಬಡತನದಲ್ಲಿ ಹುಟ್ಟಿದ ವ್ಯಕ್ತಿ ನೆಚ್ಚಿನ ಎತ್ತುಗಳಿಗೆ ಲಕ್ಷಗಟ್ಟಲೇ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣ ತೊಡಿಸಿ ಉಳವಿ ಜಾತ್ರೆಗೆ ಹೋಗಿ ಸಂಭ್ರಮಿಸುತ್ತಿದ್ದಾನೆ. 

ಇದನ್ನೂ ಓದಿ- ಇದೆಂಥಾ ವಿಸ್ಮಯ..! ಹಿಮಭರಿತ ಕಾಡಿನಲ್ಲಿ ಅಪರೂಪದ ಬಿಳಿ ಜಿಂಕೆ ಪ್ರತ್ಯಕ್ಷ.. ವಿಡಿಯೋ ವೈರಲ್‌..

ಬಸ್ಸಿನಲ್ಲಿ ಉಳವಿ ಜಾತ್ರೆಗೆ ಹೋಗಿ ಬರುತ್ತಿದ್ದ ಈರಪ್ಪ ಅಲ್ಲಿನ ಚಕ್ಕಡಿಗಳನ್ನು ನೋಡಿ ತಾನೂ ಚಕ್ಕಡಿಯೊಂದಿಗೆ ಉಳವಿಗೆ ಬರುವ ಸಂಕಲ್ಪ ಮಾಡಿಕೊಂಡಿದ್ದ. ಕಳೆದ 18 ವರ್ಷದಿಂದ ಇವರು ತಮ್ಮ ಚಕ್ಕಡಿ ತೆಗೆದುಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ- ನಡುರಸ್ತೆಯಲ್ಲಿ ಕಡವೆ ಬೇಟೆಯಾಡಿದ ಸೀಳುನಾಯಿಗಳು: ವಿಡಿಯೋ ವೈರಲ್

ತಾವು ತೆಗೆದುಕೊಂಡು ಹೋಗುವ ಎತ್ತುಗಳಿಗೆ ಅರ್ಧ ಕೆಜಿ ಬೆಳ್ಳಿಯಲ್ಲಿ 4 ಕಡಗ,  15 ತೊಲೆ ಬೆಳ್ಳಿಯಲ್ಲಿ 4 ಕೊಂಬೆಣಸು ಹಾಗೂ ಎತ್ತಿನ ಕೋಡುಗಳಿಗೆ 21 ತೊಲೆಯಲ್ಲಿ 4 ಚಿನ್ನದ ಕೊಂಬೆಣಸು ಮಾಡಿಸಿದ ರೈತ, ಅವುಗಳನ್ನು ಹಾಕಿಕೊಂಡು ಅದ್ದೂರಿಯಾಗಿ ಉಳವಿ ಜಾತ್ರೆಗೆ ತೆರಳುವ ಸಂಭ್ರಮ ಕಣ್ಣಿಗೆ ಹಬ್ಬದಂತಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News