ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಆ ಪಕ್ಷದ ಸರಕಾರ ಯಾವ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರಕಾರ ಎಂದು ಅವರು ಕಿಡಿಕಾರಿದರು.ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ದೇವೇಗೌಡರು ಗುಡುಗಿದರು.
ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ: ಛಾಯಾಚಿತ್ರ ಸ್ಪರ್ಧೆಗೆ ಫೋಟೋಗಳ ಆಹ್ವಾನ
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು; ಕಾಂಗ್ರೆಸ್ ಪಕ್ಷದ ಬಗ್ಗೆ 'ಶೇಮ್ ಶೇಮ್' ಎಂದು ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಸರಕಾರದ ಸಚಿವರ ಕಾರ್ಯವೈಖರಿ ಬಗ್ಗೆಯೂ ಮಾಜಿ ಪ್ರಧಾನಿಗಳು ತಮ್ಮ ಅಸಮಾಧಾನವನ್ನು ಹೊರಹಾಕಿದರು. ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಈ ಸದನದಲ್ಲಿ ಓದಲೇ? ಎಂದು ಅವರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಮಾಜಿ ಪ್ರಧಾನಿಗಳ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು.
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಗಂಭೀರವಾಗಿದೆ ಎಂದು ಗೌಡರು:
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯ ಮಾಡಿದರು.
ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ ಎಂದು ಅವರು ಹೇಳಿದರು.ಕೇಂದ್ರ ಬಿಜೆಪಿ ಸರಕಾರದ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯರ ಆಕ್ಷೇಪಗಳಿಗೆ ತಿರುಗೇಟು ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಲವಾಗಿ ಸಮರ್ಥಿಸಿಕೊಂಡರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.