ಗಿರೀಶ್ ಕಾರ್ನಾಡ್ ನಿಧನ: ರಾಜ್ಯದಲ್ಲಿ 1 ದಿನ ಸರ್ಕಾರಿ ರಜೆ, ಮೂರು ದಿನ ಶೋಕ

ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Last Updated : Jun 10, 2019, 12:09 PM IST
ಗಿರೀಶ್ ಕಾರ್ನಾಡ್ ನಿಧನ: ರಾಜ್ಯದಲ್ಲಿ 1 ದಿನ ಸರ್ಕಾರಿ ರಜೆ, ಮೂರು ದಿನ ಶೋಕ title=
Pic Courtesy: ZeeKannada

ಬೆಂಗಳೂರು: ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗುವುದು ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
 

Trending News