Free bus for men?: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಕಾರಕ್ಕೆ ಬಂದಮೇಲೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ʼಪಂಚʼ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಪೈಕಿ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡುವ ʼಶಕ್ತಿ ಯೋಜನೆʼಯು ಒಂದು. ಈಗಾಗಲೇ ರಾಜ್ಯದ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಪ್ರತಿದಿನವೂ ಲಕ್ಷಾಂತರ ಜನವರು KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ಈ ಉಚಿತ ಬಸ್ ಪ್ರಯಾಣ ಸದ್ಯ ಮಹಿಳೆಯರಿಗೆ ಮಾತ್ರವಿದ್ದು, ಮುಂದಿನ ದಿನಗಳಲ್ಲಿ ಈ ವ್ಯಾಪ್ತಿಗೆ ಬರುವ ಪುರುಷರಿಗೂ ಈ ಯೋಜನೆಯ ಲಾಭ ಸಿಗಲಿದೆ ಅನ್ನೋ ಸುಳಿವು ಸಿಕ್ಕಿದೆ. ಈಗಾಗಲೇ ʼಶಕ್ತಿ ಯೋಜನೆʼಯ ಅನ್ವಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಿದೆ. ಇದನ್ನು ಪುರುಷರಿಗೂ ವಿಸ್ತರಿಸಬೇಕು ಅಂತಾ ಅನೇಕರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಕನಿಷ್ಠ ವಿದ್ಯಾರ್ಥಿಗಳಿಗಾದರೂ ಉಚಿತ ಬಸ್ ಸೌಲಭ್ಯ ಒದಗಿಸಬೇಕೆಂಬ ಬೇಡಿಕೆ ಇದೆ.
ಈಗಾಗಲೇ ʼಪಂಚ ಗ್ಯಾರಂಟಿ ಯೋಜನೆʼಗಳ ಜಾರಿಯಿಂದ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದ ಹೊರೆಯಾಗಿದೆ. ಎಲ್ಲಾ ಯೋಜನೆಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರದಿಂದ ಆಗುತ್ತಿಲ್ಲ. ಹೀಗಾಗಿಯೇ ಕಳೆದೆರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ʼಕೈʼ ಸೇರಿಲ್ಲ. ಅದೇ ರೀತಿ ಅನ್ನಭಾಗ್ಯ ಯೋಜನೆಯ ಹಣವೂ ದೊರೆತಿಲ್ಲ. ಹೀಗಾಗಿ ಈ ಯೋಜನೆಗಳು ಮುಂದೆ ಏನಾಗಲಿವೆ ಅನ್ನೋದರ ಬಗ್ಗೆ ಅನೇಕರಿಗೆ ಚಿಂತೆಯಾಗಿದೆ.
ಇದನ್ನೂ ಓದಿ: ರಾಯಚೂರು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಿನ್ನಮತ
ʼಪಂಚ ಗ್ಯಾರಂಟಿ ಯೋಜನೆʼಗಳ ಜಾರಿಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬೆಲೆ ಏರಿಕೆಯ ಮೊರೆ ಹೋಗದೆ. ಸಿಕ್ಕ ಸಿಕ್ಕಲ್ಲಿ ಬೆಲೆ ಏರಿಕೆ ಮಾಡಿ ರಾಜ್ಯದ ಜನರ ಜೇಬಿಗೆ ಕನ್ನ ಹಾಕುತ್ತಿದೆ ಅನ್ನೋ ಆರೋಪಗಳು ಸಹ ವ್ಯಾಪಕವಾಗಿ ಕೇಳಿಬರುತ್ತಿವೆ. ಬೆಲೆ ಏರಿಕೆಯಿಂದ ಬೇಸತ್ತಿರುವ ರಾಜ್ಯದ ಜನರು ಈಗಾಗಲೇ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ನಮಗೆ ಯಾವುದೇ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಬೇಡ. ಬೆಲೆ ಏರಿಕೆಯನ್ನು ಆದಷ್ಟು ಬೇಗ ನಿಲ್ಲಿಸಿʼ ಅಂತಾ ಒತ್ತಾಯಿಸುತ್ತಿದ್ದಾರೆ.
ಹೀಗಾಗಿ ಸರ್ಕಾರವೇನಾದರೂ ವಿದ್ಯಾರ್ಥಿಗಳಿಗೆ ಮತ್ತು ಪುರುಷರಿಗೆ ಉಚಿತ ಬಸ್ ಸೌಲಭ್ಯ ನೀಡಿದರೆ ಭಾರೀ ನಷ್ಟವಾಗಲಿದೆ. ಈಗಾಗಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್‌ಗೆ ಒಳಗಾಗುತ್ತಿರುವ ರೋಗಿಗಳಿಗೆ ಉಚಿತ ಬಸ್ ಮಾಡಿಕೊಡಬೇಕೆಂದು ಸ್ಪೀಕರ್ ಯು.ಟಿ.ಖಾದರ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಉದ್ಯೋಗಿಗಳೇ.. ಕೆಲಸದ ವೇಳೆ ಕಚೇರಿಯಲ್ಲಿ "ಸ್ವಲ್ಪ ನಿದ್ದೆ" ಮಾಡಬಹುದೇ..? ಹೈಕೋರ್ಟ್ ಮಹತ್ವದ ತೀರ್ಪು
ಸಿಎಂಗೆ ಯುಟಿ ಖಾದರ್ ಪತ್ರ!
ʼರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್‌ಗಾಗಿ ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕುʼ ಅಂತಾ ಸಿಎಂಗೆ ಯು.ಟಿ.ಖಾದರ್ ಪತ್ರ ಬರೆದಿದ್ದಾರೆ. ಈ ಮನವಿಗೆ ಸಿಎಂ ʼಓಕೆʼ ಅಂದರೆ ಇನ್ಮುಂದೆ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗುತ್ತಿರುವ ಪುರುಷರಿಗೂ ಉಚಿತ ಬಸ್ ಪ್ರಯಾಣದ ಸೌಲಭ್ಯವು ಸಿಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.