ಬೆಂಗಳೂರು : ಎ.ಸಿ.ಬಿ ರದ್ದು ಗೊಳಿಸಿ ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಣಾಳಿಕೆ ಆಧರಿಸಿಯೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಪಿನ ಮೂಲ ಪ್ರತಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ಚರ್ಚನಡೆಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹದಳ ಲೋಕಾಯುಕ್ತ ವ್ಯಾಪ್ತಿಗೆ
ಇನ್ನು ಈ ಬಗ್ಗೆ ಮಾತನಾಡಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಹೈಕೋರ್ಟ್ ನಿಂದ ಎಸಿಬಿ ರದ್ದುಗೊಳಿಸಿ ಆದೇಶ ಆಗಿದೆ. ಈ ಬಗ್ಗೆ ಸಿಎಂ ಪರಿಶೀಲನೆ ನಡೆಸುತ್ತಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲೂ ಈ ಕುರಿತು ಚರ್ಚೆ ಆಗುವ ಸಾಧ್ಯತೆ ಇದೆ ಎಂಡು ಹೇಳಿದ್ದಾರೆ. ಈ ಕುರಿತಂತೆ
ಸೂಕ್ತ ನಿರ್ಧಾರವನ್ನು ಸರ್ಕಾರ ಕೈಗಗೊಳ್ಳಲಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇನ್ನು ಎಸಿಬಿಯನ್ನು ಜಾರಿಗೆ ತಂದವರು ಸಿದ್ದರಾಮಯ್ಯ. ಹಿಂದಿನ ಕಾಂಗ್ರೆಸ್ ಸರ್ಕಾರ ಎಸಿಬಿ ಜಾರಿಗೆ ತಂದಿತ್ತು. ಇದರಿಂದ ಬಿಜೆಪಿಗೆ ಯಾವುದೇ ಹಿನ್ನೆಡೆ ಆಗಿಲ್ಲ. ಹಿನ್ನೆಡೆ ಆಗಿದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಆರ್ ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ : Today Vegetable Price : ಕರ್ನಾಟಕದಲ್ಲಿ ಇಂದಿನ ತರಕಾರಿ ದರ ಹೀಗಿದೆ
ಗುರುವಾರ ಹೈಕೋರ್ಟ್ ಎಸಿಬಿ ರದ್ದುಗೊಳಿಸಿ ಮಹತ್ವದ ಆದೇಶವನ್ನು ಹೊರಡಿಸಿತ್ತು. ಹೈಕೋರ್ಟ್ ಈ ಆದೇಶದ ಬಗ್ಗೆ ಮೆಚ್ಚುಗೆ ಕೂಡಾ ವ್ಯಕ್ತವಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.