ಯುವ ನಿಧಿ ಯೋಜನೆಯನ್ನ ಯುವಕರಿಗೆ ತಲುಪಿಸುವತ್ತ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಸದಸ್ಯರು ಮುಂದಾಗಬೇಕು - ಸಚಿವ ದಿನೇಶ್ ಗುಂಡೂರಾವ್

Yuva Nidhi: ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಯ ರೀತಿಯಲ್ಲಿಯೇ ಯುವ ನಿಧಿ ಯೋಜನೆಗೆ ಹೆಚ್ಚಿನ ಪ್ರಚಾರ ನೀಡಿ ವಿದ್ಯಾವಂತ ಯುವಕರಿಗೆ ಯೋಜನೆ ತಲುಪುಸುವ ನಿಟ್ಟಿನಲ್ಲಿ ಗ್ಯಾರಂಟಿಗಳ ಅನುಷ್ಠಾನ ಸಮಿತಿಯವರು ಮುಂದಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ತಮ್ಮ ಶಾಸಕರ ಕಚೇರಿಯಲ್ಲಿ ಇಂದು ಗಾಂದಿ ನಗರ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಬಡವರ ಪಾಲಿಗೆ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ ಎಂದರು.   

Written by - Manjunath Hosahalli | Edited by - Zee Kannada News Desk | Last Updated : Jan 15, 2025, 09:24 PM IST
  • ಗಾಂದಿನಗರ ಕ್ಷೇತ್ರದ ಸ್ಲಂ ನಿವಾಸಿ ಪ್ರದೇಶಗಳಲ್ಲಿ ಶೇ 90 ರಷ್ಟು ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ.
  • ಗ್ಯಾರಂಟಿ ಯೋಜನೆಗಳು ವೇಗವಾಗಿ ಜನರಿಗೆ ತಲುಪಿದ್ದು, ಯೋಜನೆಗಳ ಸದ್ಬಳಕೆ ಆಗುತ್ತಿದೆ.
  • ಬಡವರು ಮತ್ತು ಮಧ್ಯಮವರ್ಗದವರು ಎಷ್ಟು ಜನರಿದ್ದಾರೆ ಎಂಬುದನ್ನ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವ ನಿಧಿ ಯೋಜನೆಯನ್ನ ಯುವಕರಿಗೆ ತಲುಪಿಸುವತ್ತ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಸದಸ್ಯರು ಮುಂದಾಗಬೇಕು - ಸಚಿವ ದಿನೇಶ್ ಗುಂಡೂರಾವ್  title=

Yuva Nidhi: ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಯ ರೀತಿಯಲ್ಲಿಯೇ ಯುವ ನಿಧಿ ಯೋಜನೆಗೆ ಹೆಚ್ಚಿನ ಪ್ರಚಾರ ನೀಡಿ ವಿದ್ಯಾವಂತ ಯುವಕರಿಗೆ ಯೋಜನೆ ತಲುಪುಸುವ ನಿಟ್ಟಿನಲ್ಲಿ ಗ್ಯಾರಂಟಿಗಳ ಅನುಷ್ಠಾನ ಸಮಿತಿಯವರು ಮುಂದಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ತಮ್ಮ ಶಾಸಕರ ಕಚೇರಿಯಲ್ಲಿ ಇಂದು ಗಾಂದಿ ನಗರ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಬಡವರ ಪಾಲಿಗೆ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ ಎಂದರು. 

ಗಾಂದಿನಗರ ಕ್ಷೇತ್ರದ ಸ್ಲಂ ನಿವಾಸಿ ಪ್ರದೇಶಗಳಲ್ಲಿ ಶೇ 90 ರಷ್ಟು ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳು ವೇಗವಾಗಿ ಜನರಿಗೆ ತಲುಪಿದ್ದು, ಯೋಜನೆಗಳ ಸದ್ಬಳಕೆ ಆಗುತ್ತಿದೆ. ಇದರಲ್ಲಿ ಬಡವರು ಮತ್ತು ಮಧ್ಯಮವರ್ಗದವರು ಎಷ್ಟು ಜನರಿದ್ದಾರೆ ಎಂಬುದನ್ನ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಯೋಜನೆಗಳ ಅನುಷ್ಠಾನದಲ್ಲಿ ಸಣ್ಣ ಮಟ್ಟದ ಅಡೆ ತಡೆಗಳಿದ್ದರು ಅವುಗಳನ್ನ ನಿವಾರಿಸುವುದು ಮುಖ್ಯ. ಕುಂದುಕೊರತೆಗಳನ್ನ ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಜನರಿಗೆ ಸುಲಲಿತವಾಗಿ ಗ್ಯಾರಂಟಿ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.‌

ಆಹಾರ ಇಲಾಖೆಯಿಂದ ಬಡವರ ಮನೆಗಳಿಗೆ ಖುದ್ದಾಗಿ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ ಇದರಿಂದ ದುರುಪಯೋಗ ಕಡಿಮೆಯಾಗುತ್ತಿದೆ.  ಹಸಿವಿನಿಂದ ಯಾರು ಮಲಗಬಾರದು ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ತಂದಿದೆ. ಯುವತಿಯರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮಿ ಯೋಜನೆಯಿಂದ ಸ್ವಾವಲಂಭಿ ಬದುಕು ಸಾಗಿಸಲು ಅನುಕೂಲವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ 

ಯುವ ನಿಧಿ ಯೋಜನೆಯ ನೊಂದಣಿ ಪ್ರಾರಂಭದ ಪೊಸ್ಟರ್ ಬಿಡುಗಡೆ ಮಾಡಿದ ಸಚಿವರು, ಯುವನಿಧಿ ಯೋಜನೆಗೆ ನೊಂದಣಿಯಾದ 180 ದಿನಗಳ ಬಳಿಕ ಫಲಾನುಭವಿಗಳ ಅಕೌಂಟ್ ಗೆ ಪ್ರೋತ್ಸಾಹ ಧನ ವರ್ಗಾವಣೆ ಆಗುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ. ಯುವ ನಿಧಿ ಬಗ್ಗೆ ವಿವರವಾದ ಮಾಹಿತಿಯನ್ನ ತಲುಪಿಸುವುದರ ಮೂಲಕ ಹೆಚ್ಚಿನ ಪ್ರಚಾರದೊಂದಿಗೆ ವಿದ್ಯಾವಂತ ಯುವಕರಿಗೆ ಯುವನಿಧಿ ಯೋಜನೆಯ ಲಾಭ ದೊರಕಿಸಿಕೊಡುವ ನಿಟ್ಟಿನಲ್ಲಿ ಗ್ಯಾರಂಟಿಗಳ ಅನುಷ್ಠಾನ ಸಮಿತಿಯವರು ಸದಸ್ಯರು ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಸೂಚನೆ ನೀಡಿದರು. ಗಾಂದಿನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸಮೂರ್ತಿ, ಸರವಣನ್ ಸೇರಿದಂತೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News