Republic Day 2022: ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕರಿಸಿದ್ದಕ್ಕೆ ಎಚ್​​ಡಿಕೆ ಆಕ್ರೋಶ

ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲವೆಂದು ಕಿಡಿಕಾರಿರುವ ಕುಮಾರಸ್ವಾಮಿ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕೆಂದು ಆಗ್ರಹಿಸಿದ್ದಾರೆ.   

Written by - Zee Kannada News Desk | Last Updated : Jan 16, 2022, 10:32 AM IST
  • ಕೇಂದ್ರದ ಗಣರಾಜ್ಯೋತ್ಸವ ಸಮಿತಿ ಬ್ರಹ್ಮರ್ಷಿ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ
  • ಇದು ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನವೆಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
  • ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ ಗೆ ಅಂಗೀಕಾರ ಮಾಡಬೇಕು
Republic Day 2022: ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕರಿಸಿದ್ದಕ್ಕೆ ಎಚ್​​ಡಿಕೆ ಆಕ್ರೋಶ title=
ಕೇಂದ್ರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಬೇಸರ ವ್ಯಕ್ತಪಡಿಸಿದ್ದಾರೆ.   

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು(Narayana Guru), ‘ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು’ ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು. ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ’ವೆಂದು ಕಿಡಿಕಾರಿದ್ದಾರೆ.   

ಇದನ್ನೂ ಓದಿ: Mangalore:ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಹಿಡಿದ ಮಂಗಳೂರು ಪೊಲೀಸರು

‘ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರ(Karnataka Tableau)ವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ. ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್(Republic Day Parade)ಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.   

ಇದನ್ನೂ ಓದಿ: ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News