ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ತಿಂಗಳ ಮಗುವಿಗೆ HMPV ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದು ಭಾರತದ ಮೊದಲ ಶಂಕಿತ HMPV ವೈರಸ್ ಪ್ರಕರಣವಾಗಿದೆ. ಪ್ರಯೋಗಾಲಯದ ವರದಿಯ ಪ್ರಕಾರ ಜನವರಿ 2 ರಂದು ಮಗುವಿನ ಮಾದರಿಯನ್ನು ಸಂಗ್ರಹಿಸಲಾಗಿದೆ. HMPV ಪ್ರಾಥಮಿಕವಾಗಿ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ.
8 ತಿಂಗಳ ಮಗುವಿಗೆ ಎಚ್ಎಂಪಿವಿ ವೈರಸ್ ಸೋಂಕು ತಗುಲಿರುವುಸು ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸೋಂಕು ಪತ್ತೆಯಾಗಿರುವ ಮಗು ಮತ್ತು ಕುಟುಂಬದವರ ಟ್ರಾವೆಲ್ ಹಿಸ್ಟರಿ ಪರಿಶೀಲಿಸಿದ್ದು, ಎಲ್ಲಿಯೂ ಪ್ರಯಾಣ ಬೆಳೆಸಿದಿರುವ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ.
ಇದನ್ನೂ ಓದಿ: HMPV Symptoms: ಕೊರೊನಾ ಬಳಿಕ ಮತ್ತೆ ಭೀತಿ ಹುಟ್ಟಿಸಿದ HMPV ವೈರಸ್ ಹೇಗೆ ಹರಡುತ್ತದೆ, ಅದರ ಲಕ್ಷಣಗಳೇನು ತಿಳಿಯಿರಿ
ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಎಚ್ಎಂಪಿವಿ ಮೊದಲು 2001 ರಲ್ಲಿ ಕಂಡುಬಂದಿತ್ತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಕೆಲವು ಸೆರೋಲಾಜಿಕ್ ಪುರಾವೆಗಳ ಪ್ರಕಾರ HMPV ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎನ್ನಲಾಗುತ್ತದೆ.
ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ಉಸಿರಾಟದ ಅಂಗಗಳ ಮೇಲೆ ಪ್ರಭಾವ ಬೀರುವ ವೈರಸ್ ಆಗಿದೆ. ಇದು ಸಾಮಾನ್ಯವಾಗಿ ಚಿಕ್ಕ ಮಕ್ಕಳು, ವೃದ್ಧರು ಮತ್ತು ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವ ವ್ಯಕ್ತಿಗಳ ಮೇಲೆ ದಾಳಿ ಮಾಡುವುದು. ಜ್ವರ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ.
ಎಚ್ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲದಿರುವುದು ಗಮನಾರ್ಹ. ಎಚ್ಎಂಪಿವಿ ವೈರಸ್ ಬಗ್ಗೆ ಭಾರತದಲ್ಲಿ ಸದ್ಯ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಹೇಳಿದೆ.
ಇದನ್ನೂ ಓದಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಸಿ.ಟಿ.ರವಿ
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.