ಬೆಂಗಳೂರು : ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದ ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: PM Modi Fitness: 72ರ ಹರೆಯದಲ್ಲೂ ಪ್ರಧಾನಿ ಮೋದಿ ಹೇಗೆ ಫಿಟ್ ಆಗಿದ್ದಾರೆ ಗೊತ್ತಾ?
ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.