ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆ ಮತ್ತು ಇಡಿ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆಯನ್ನು ಖಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರರವರು "ಕಾಂಗ್ರೆಸ್ ನಾಯಕರ ವರ್ತನೆ ಗುಲಾಮಿತನದ ಅನಾವರಣ" ಎಂದು ಟೀಕಿಸಿದ್ದಾರೆ.
ಇದನ್ನು ಓದಿ: ಇವರು ರಾಷ್ಟ್ರಪತಿಯಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತದೆ : ಬಿಜೆಪಿ ಸಂಸದ
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, "ದೇಶದಲ್ಲಿ ಕಾಂಗ್ರೆಸ್ ನಾಯಕರಿಗೊಂದು ಕಾನೂನು, ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು ಅಂತಾ ಸಂವಿಧಾನದಲ್ಲಿ ಇದೆಯೇ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
"130 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅದರ ನಾಯಕರಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ? ಕಾಂಗ್ರೆಸ್ ನಾಯಕರು ಹಾಗೂ ಅವರ ಹಿಂಬಾಲಕರು ಯಾಕೆ ಪ್ರತಿಭಟನೆ ಮಾಡಬೇಕು "ಎಂದು ಪ್ರಶ್ನಿಸಿದರು.
ಇದನ್ನು ಓದಿ:OPPO: ನೀರಿನಲ್ಲಿಯೂ ಹಾಳಾಗಲ್ಲ ಈ ಸ್ಮಾರ್ಟ್‌ಫೋನ್- ಇಲ್ಲಿದೆ ಇದರ ವೈಶಿಷ್ಟ್ಯಗಳು!
"ಕೋವಿಡ್ ವಿರುದ್ದದ ಹೋರಾಟ ಇನ್ನೂ ನಡೆಯುತ್ತಿದೆ. ಬೆಂಗಳೂರಿನ ಎರಡು ಶಾಲೆಗಳಲ್ಲಿ ಕೊರೋನ ಸ್ಫೋಟಗೊಂಡಿದ್ದು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ" ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.