ಬೆಂಗಳೂರು:- ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸೂಚಿಸಿದರು.
ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಕ್ರಮ ವಹಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ,ಅತ್ಯಂತ ಜವಾಬ್ಧಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು ಎಂದರು.
ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಅಗತ್ಯ ಬಂದೋಬಸ್ತ್ ಹಿನ್ನಲೆಯಲ್ಲಿ ನಗರದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಬೇಡ. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡಿ. ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆ ವೇಳೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರು ಏನೇ ಹೇಳಿದರು ಕೇಳುವುದಿಲ್ಲ ಎಂದು ಎಚ್ಚರಿಸಿದರು.
ಬಿಬಿಎಂಪಿ, ಬಿಎಂಟಿಸಿ ಬಿಎಂಆರ್ಸಿಎಲ್, ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ನೆರವು ಪಡೆದುಕೊಳ್ಳಬೇಕು. ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ಡ್ರಂಕ್ ಆ್ಯಂಡ್ ಡ್ರೈವ್, ಬೈಕ್ ವ್ಹೀಲಿಂಗ್ ಮಾಡುವ ಕಿಡಿಗೇಡಿಗಳು ಹಾಗೂ ಹಳೇ ಪ್ರಕರಣಗಳ ಆರೋಪಿಗಳ ಮೇಲೆ ನಿಗಾ ಇರಿಸಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು.
ಇದನ್ನೂ ಓದಿ: ಮಧುಮೇಹಿಗಳಿಗೆ ವರದಾನ.. ಊಟಕ್ಕೂ ಮುನ್ನ ಈ ಸಿಹಿಯಾದ ಹಣ್ಣು ತಿಂದ್ರೆ ಜನ್ಮದಲ್ಲೇ ಹೆಚ್ಚಾಗಲ್ಲ ಬ್ಲಡ್ ಶುಗರ್!
ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಸಿಬಿ ವಿಭಾಗದ ಹೆಚ್ಚುವರಿ ಆಯುಕ್ತ ಡಾ. ಚಂದ್ರಗುಪ್ತ ಹಾಗೂ ಎಲ್ಲ ವಿಭಾಗದ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಇದ್ದರು.
ಏಳು ಲಕ್ಷ ಜನ ಸೇರುವ ಸಾಧ್ಯತೆ:-
ನಗರದಲ್ಲಿ ಹೊಸ ವರ್ಷ ಆಚರಣೆಗೆ 7 ಲಕ್ಷ ಜನ ಸೇರುವ ಸಾಧ್ಯತೆ ಇದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಲಾಗಿದೆ.ಎಲ್ಲರು ಸಂತೋಷದಿಂದ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಿಸಲು ಸಹಕರಿಸಲಾಗುವುದು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮೆಟ್ರೋ ವ್ಯವಸ್ಥೆ, ಓಲಾ, ಊಬರ್ ಮುಂತಾದ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗಿದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ