ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ : ಸಿಟಿ ರವಿಗೆ ಮಧ್ಯಂತರ ರಿಲೀಫ್

ವಾದ, ಪ್ರತಿವಾದ ಆಲಿಸಿದ ಕೋರ್ಟ್​, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿಕೆ ಮಾಡಿದೆ. ಹಾಗೆ ಫೆಬ್ರವರಿ 20 ರವರೆಗೆ ಬಲವಂತದ ಕ್ರಮ ಕೈಗೊಳ್ಳದ ಹಾಗೆ ಸೂಚನೆ ನೀಡಿದೆ.  

Written by - Bhavya Sunil Bangera | Edited by - Ranjitha R K | Last Updated : Jan 30, 2025, 04:26 PM IST
  • ಸಿಟಿ ರವಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ.
  • ವಿಚಾರಣೆ ಫೆಬ್ರವರಿ 13ಕ್ಕೆ ಮುಂದೂಡಿಕೆ
  • ಫೆಬ್ರವರಿ 20 ರವರೆಗೆ ಬಲವಂತದ ಕ್ರಮ ಕೈಗೊಳ್ಳದ ಹಾಗೆ ಸೂಚನೆ
 ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ : ಸಿಟಿ ರವಿಗೆ ಮಧ್ಯಂತರ ರಿಲೀಫ್ title=

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸದ್ಯ ಸಿಟಿ ರವಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಸಲ್ಲಿಸಿರುವ ಅರ್ಜಿಯ ವಾದ, ಪ್ರತಿವಾದ ಇಂದು ನಡೆದಿದ್ದು  ಇಂದಿನ ವರದಿ ಇಲ್ಲಿದೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆ,ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದತಿ ಕೋರಿ ಬಿಜೆಪಿಯ ಎಂಎಲ್‌ಸಿ ಸಿ ಟಿ ರವಿ ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿಗಳಾದ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ನಡೆಯಿತು. ವಾದ, ಪ್ರತಿವಾದ ಆಲಿಸಿದ ಕೋರ್ಟ್​, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿಕೆ ಮಾಡಿದೆ. ಹಾಗೆ ಫೆಬ್ರವರಿ 20 ರವರೆಗೆ ಬಲವಂತದ ಕ್ರಮ ಕೈಗೊಳ್ಳದ ಹಾಗೆ ಸೂಚನೆ ನೀಡಿದೆ.

ಇದನ್ನೂ ಓದಿ : ಹತ್ಯೆಯಾಗುವ ಮುನ್ನ ಗದುಗಿನ ಯುವಕನಿಗೆ ಪತ್ರ ಬರೆದಿದ್ದ ಗಾಂಧೀಜಿ..!

ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ ವಿಧಾನ ಪರಿಷತ್​​ ನಲ್ಲಿ  ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ . ಸಂವಿಧಾನದ ಆರ್ಟಿಕಲ್ 194(2) ರ ಅನ್ವಯ ಸದನದಲ್ಲಿದ್ದಾಗ ಸದಸ್ಯರು ಅಲ್ಲಿನ ಕಾನೂನು ವ್ಯಾಪ್ತಿಗೇ ಬರುತ್ತಾರೆ. ಪರಿಸ್ಥಿತಿಯ ಆಧಾರದ ಮೇಲೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದರು. ಹಾಗೆ ಆರ್ಟಿಕಲ್ 194(2) ಶಾಸಕನಿಗೆ ನಿರ್ಭೀತಿಯಿಂದ ಮಾತನಾಡಲು ಅವಕಾಶ ನೀಡುತ್ತದೆ. ಅವರಿಗೆ ಸದನದ ಒಳಗೆ ಸಂಪೂರ್ಣ ಹಕ್ಕಿದೆ ಎಂದು ವಾದ ಮಂಡಿಸಿದರು.

ಇದೇ ವೇಳೆ ಎಸ್ ಪಿಪಿ ವಾದ ಮಾಡಿ, ವಿಚಾರಣಾ ನ್ಯಾಯಾಲಯದ ಮುಂದೆ ಬಾಕಿ ಉಳಿದಿರುವ ಪ್ರಕ್ರಿಯೆಗಳ ಮೇಲೆ ವಿಧಿಸಲಾದ ತಡೆಯಾಜ್ಞೆಯನ್ನು ತೆರವು ಮಾಡಲು ನ್ಯಾಯಾಲಯವನ್ನು ಮನವಿ ಮಾಡಿದರು. ಹಾಗೆ ಸಿಟಿ ರವಿ ಅವರ ವಾಯ್ಸ್ ಸ್ಯಾಂಪಲ್ ಪಡೆಯುವುದಕ್ಕೆ ಸಂಬಂಧಿಸಿದ ಅರ್ಜಿ ಬಾಕಿ ಇದೆ ಎಂದು ತಿಳಿಸಿದರು.

ಇದನ್ನೂ ಓದಿ : ವಿಜಯೇಂದ್ರ ಚಡ್ಡಿ ಹಾಕೋ ಮುಂಚೆ ನಾನು ಜಿಲ್ಲಾಧ್ಯಕ್ಷನಾಗಿದ್ದೆ : ಯತ್ನಾಳ್ ತೀವ್ರ ವಾಗ್ದಾಳಿ

ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 13ಕ್ಕೆ ನಿಗದಿಪಡಿಸಿದೆ. ಅವತ್ತು ರವಿ ಅವರ ವಾಯ್ಸ್ ಸ್ಯಾಂಪಲ್ ತನಿಖೆಯ ಬಗ್ಗೆ ಕೂಡ ತೀರ್ಪು ನೀಡುವ ಸಾಧ್ಯತೆ ಇದೆ. ಹಾಗೆ  ಈ ಹಿಂದೆ ಸಿಟಿ ರವಿ ವಿರುದ್ಧ ಇಂದಿನ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿತ್ತು.ಅದನ್ನ ಮತ್ತೆ ವಿಸ್ತರಣೆ ಮಾಡಿದ್ದು ಸದ್ಯ ಸಿಟಿ ರವಿ ತನಿಖೆಯಿಂದ ಕೊಂಚ ರಿಲೀಫ್ ಆಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News