ಬೆಂಗಳೂರು: ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಯಾವ ವಿಚಾರಗಳನ್ನು ಅದರ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಯಾವುದೇ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂದರು.
ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ನಡೆದುಕೊಂಡಿದ್ದೇವೆ ಎಂಬ ವಾದ ಇರುತ್ತದೆ. ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಬೇರೆಬೇರೆ ರೀತಿಯಲ್ಲಿ ಮಾಹಿತಿಯನ್ನು ಕೇಳುವ ಸಂದರ್ಭದಲ್ಲಿ, ಇವರನ್ನು ಕೇಳದೆ ಜಡ್ಜ್‌ಮೆಂಟ್ ಆಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅದರ ಬಗ್ಗೆ ಟೀಕೆ ಮಾಡಲು ಆಗಲ್ಲ. ಸಭಾಪತಿಗಳು ದಾಖಲೆಗಳಿಲ್ಲ ಎಂದು ಹೇಳಿರುವುದು ನನಗೆ ಗೊತ್ತಿಲ್ಲ. ಕೆಲವರು ಸದನ ಮುಗಿದ ಬಳಿಕ ಘಟನೆ ನಡೆಯಿತು ಅಂತ ಹೇಳುತ್ತಿದ್ದಾರೆ. ಆದ್ದರಿಂದ ಸಭಾಪತಿಗಳಿಗೆ ಇದರಲ್ಲಿ ಏನು ಹೇಳೋಕೆ ಆಗಲ್ಲ ಅಂತ ಕೆಲವರು ವಿಶ್ಲೇಷಣೆ ಮಾಡುತ್ತಾರೆ. ಇನ್ನು ಕೆಲವರು ಸದನ ನಡೀತಾ ಇತ್ತು ಅಂತ ವಿಶ್ಲೇಷಣೆ ಮಾಡಿದ್ದಾರೆ. ಅದನ್ನೆಲ್ಲ ಈಗ ನಾನು ಮಾತನಾಡಲು ಹೋಗಲ್ಲ ಎಂದರು.
ಆ ಮಾಹಿತಿಯನ್ನ ಕೇಳುತ್ತೇನೆ. ಮಾಹಿತಿ ಬಂದಮೇಲೆ ಹೇಳುತ್ತೇನೆ. ಸಿ.ಟಿ.ರವಿ ಮೇಲೆ ಹಲ್ಲೆ ಯತ್ನ ಮಾಡಿದ ವಿಚಾರಕ್ಕೆ 24 ಜನರನ್ನು ಆ ಕ್ಷಣದಲ್ಲೇ ಬಂಧಿಸಲಾಗಿದೆ. ತದನಂತರ ಅವರನ್ನ ಬಿಟ್ಟಿದ್ದಾರೆ. ಬಂಧನ ಮಾಡದೇ ಹೋಗಿದ್ದರೆ ಇನ್ನೂ ಹೆಚ್ಚು ಘಟನೆಗಳು ಆಗುತ್ತಿತ್ತು. ಕೋರ್ಟ್ ನೀಡಿರುವ ತಡೆಯಾಜ್ಞೆ ಆದೇಶವನ್ನು ತೆರವುಗೊಳಿಸಲು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಗೃಹ ಇಲಾಖೆ ಓವರ್ ಟೇಕ್ ಮಾಡಿ ಈ ಬೆಳವಣಿಗೆ ಆಯ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಮಾಡಲು ಆಗುತ್ತಾ? ನಮ್ಮ ಮೇಲೆ ಮುಖ್ಯಮಂತ್ರಿಗಳು ಇದ್ದಾರೆ. ಮುಖ್ಯಮಂತ್ರಿ ಬಿಟ್ಟರೆ ಬೇರೆ ಯಾರು ಇಲ್ಲ. ಗೃಹ ಸಚಿವರ ಮೇಲೆ ಮಂತ್ರಿಗಳ ಮೇಲೆ ಮುಖ್ಯಂಮಂತ್ರಿ ಇದ್ದಾರೆ. ಅಷ್ಟು ಬಿಟ್ರೆ ಬೇರೇನೂ ಕಾಣಿಸ್ತಾಯಿಲ್ಲ. ನನಗೆ ಬೇಕಾದಷ್ಟು ಸ್ವಾತಂತ್ರ್ಯ ಇದೆ ಎಂದರು.
ಕಲಾಪ ಸೂಕ್ತ ರೀತಿಯಲ್ಲಿ ನಡೆದಿದೆಯಾ ಅನ್ನೋ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಅನೇಕ ಪ್ರತಿಭಟನೆಗಳು ನಡೆದವು. ಎಸ್‌ಸಿ, ಎಸ್‌ಟಿ, ವಕೀಲರು, ರೈತರು, ಪಂಚಮಸಾಲಿ ಸಮುದಾಯದ ಪ್ರತಿಭಟನೆಗಳಾದವು. ಎರಡು ಸದನಗಳಲ್ಲಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಚರ್ಚೆಯಾಗಿದೆ. ವಕ್ಫ್ ವಿಚಾರವಾಗಿ ಚರ್ಚೆಯಾಗಿದ್ದು, ಅದಕ್ಕೆ ಸಚಿವರು ಸಮಂಜಸವಾಗಿ ಉತ್ತರ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರಿಗೆ ಉತ್ತರ ನೀಡಲು ಬಿಡಲಿಲ್ಲ. ಎಲ್ಲಾ ಸಮಯ ವ್ಯರ್ಥ ಆಯ್ತು ಅಂತ ಹೇಳಲು ಆಗುವುದಿಲ್ಲ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.